Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾಲುವೆಗಳ ನೀರಿನ ಹರಿವನ್ನು ವೀಕ್ಷಿಸಿದ ಸಚಿವ ಸತೀಶ್‌ ಜಾರಕಿಹೊಳಿ

Advertisement
ಬೆಳಗಾವಿ: ವಿವಿಧ ಕಾಲುವೆಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣವನ್ನು ಇಂದು ಖುದ್ದಾಗಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಪರಿಶೀಲನೆ ನಡೆಸಿ ಅಂತಿಮ ಹಂತದವರೆಗೆ ನೀರು ತಲುಪುವಂತೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ನಂತರ ಮೂಡಲಗಿ ತಾಲುಕಿನ ಕಲ್ಲೋಳಿ ಹಾಗೂ ನಾಗನೂರ ಪಟ್ಟಣದ ಹಳ್ಳ, ಮುಗಳಖೋಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾಲುವೆಗಳು ಹಾಗೂ ಬಾಗಲಕೋಟೆ ಜಿಲ್ಲೆಯ ಚುಮ್ಮಡ ಗ್ರಾಮದಲ್ಲಿ ಘಟಪ್ರಭಾ ಎಡದಂಡೆ ಕಾಲುವೆಗಳ ವೀಕ್ಷಣೆ ನಡೆಸಿದ ಸಚಿವರು, ನಂತರ ಮಹಾಲಿಂಗಪುರದಲ್ಲಿ ಎಲ್ಲಾ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಕಾಲುವೆಯ ಅಂತಿಮ ಘಟ್ಟದವರೆಗೂ ನೀರು ತಲುಪುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದಕ್ಕೂ ಮೊದಲು ಮುಗಳಖೋಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾಲುವೆ ನೀರಿನ ಹರಿವನ್ನು ವೀಕ್ಷಿಸಿ, ಅಂತಿಮ ಹಂತದವರೆಗೆ ನೀರು ತಲುಪುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಮೂಡಲಗಿಯ ತಾಲೂಕಿನ ಕಲ್ಲೋಳಿ ಹಾಗೂ ನಾಗನೂರ ಪಟ್ಟಣದ ಹಳ್ಳದ ಪರಿಶೀಲನೆಯನ್ನು ನಡೆಸಿ, ಹೆಚ್ಚುವರಿ ನೀರು ಹರಿದು ಹೋಗುತ್ತಿದ್ದರಿಂದ ಕೆಇಬಿ ಅಧಿಕಾರಿಗಳಿಗೆ ಹಳ್ಳದ ಸುತ್ತಮುತ್ತಲಿನ ರೈತರ ಹೊಲಗಳಿಗೆ ಹೆಚ್ಚು ಸಮಯ ಕರೆಂಟ್ ನೀಡಲು ತಿಳಿಸಿದರು.



ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ: ಈಗಾಗಲೇ ಬಿಸಿಲಿನಿಂದ ಹಳ್ಳಗಳು ಹಾಗೂ ಕೊಳವೆ ಬಾವಿಗಳು ಬತ್ತುತ್ತಿರುವ ಹಿನ್ನೆಲೆಯಲ್ಲಿ, ಕಾಲುವೆ ನೀರು ಅಂತಿಮ ಹಂತದವರೆಗೆ ತಲುಪುವವರೆಗೆ ನೀರು ನಿರಂತರವಾಗಿ ಹರಿಯುವಂತೆ ಕ್ರಮ ಕೈಗಳ್ಳಬೇಕು. ಅಲ್ಲದೇ ಬಹುತೇಕ ಕಾಲುವೆಗಳಲ್ಲಿ ಹೂಳು ಮತ್ತು ಗಿಡಗಂಟಿ ಇರುವದರಿಂದ ನೀರು ಸರಾಗವಾಗಿ ಹರಿಯದ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ಕೆರೆಕಟ್ಟೆಗಳನ್ನು ತುಂಬಿಸುವ ಗುರುತರವಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಆದ್ದರಿಂದ ತಾಂತ್ರಿಕ ಕಾರಣ ನೀಡದೆ ಎಲ್ಲಾ ಕಾಲುವೆಗಳಲ್ಲಿ ಬೆಳೆದಿರುವ ಗಿಡಗಂಟಿ ಸ್ವಚ್ಛಗೊಳಿಸಿ ಮತ್ತು ತುಂಬಿರುವ ಮಣ್ಣನ್ನು ತೆಗೆಸಿ ಸರಾಗವಾಗಿ ನೀರು ಹರಿಯಲು ಕ್ರಮ ವಹಿಸಬೇಕು. ಮುಖ್ಯವಾಗಿ ಈ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ ನೀಡಿದರು.

ಇದೇ ವೇಳೆ ಮಾಜಿ ಶಾಸಕ ಶಾಮ್‌ ಘಾಟಗೆ, ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಇದ್ದರು.

ಪ್ರತೀಕ್ ಚಿಟಗಿ

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ