Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಏಪ್ರಿಲ್ 30 ರಂದು ಉಪವಿಭಾಗ ಮಟ್ಟದ ಬೃಹತ್ ಬಸವ ಜಯಂತಿ 

Advertisement
ತಿಪಟೂರು: ತರಳಬಾಳು ಜಗದ್ಗುರು ಬೃಹನ್ಮಠ ಹಾಲ್ಕುರಿಕೆಯಲ್ಲಿ ಏಪ್ರಿಲ್ 30 ರಂದು ಸಂಜೆ 5.30 ಕ್ಕೆ, ತರಳಬಾಳು ಇಂಟರ್ನ್ಯಾಷನಲ್ ಶಾಲೆಯ ಆವರಣದಲ್ಲಿ ಉಪವಿಭಾಗ ಮಟ್ಟದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಿಸಲಾಗುವುದು ಎಂದು ಸಾಧು ವೀರಶೈವ ಸಮಾಜದ ಅಧ್ಯಕ್ಷ ಪಟ್ರೆಹಳ್ಳಿ ನಂಜುಂಡಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತರಳಬಾಳು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ಆದೇಶದ ಮೇರೆಗೆ, ಧಾರ್ಮಿಕ ನಾಡು ಹಾಲ್ಕುರಿಕೆಯಲ್ಲಿ ಏಪ್ರಿಲ್ 30 ರಂದು ಬಸವನ ಜಯಂತಿ ಆಚರಿಸುತಿದ್ದೇವೆ, ತರಳಬಾಳು ಶ್ರೀಗಳು, ಗುರುಪರದೇಶಿಕೇಂದ್ರ ಸ್ವಾಮಿಜಿಗಳು, ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್, ಜಿಲ್ಲಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿದಂತೆ ಚಿಕ್ಕನಾಯಕನಹಳ್ಳಿ,ತಿಪಟೂರು ಮತ್ತು ತುರುವೇಕೆರೆ ತಾಲ್ಲೂಕಿನ ಸಾಧು ವೀರಶೈವ ಸಮಾಜದ ಸುಮಾರು 5 ರಿಂದ 6 ಸಾವಿರ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ದಾಸೋಹ ವ್ಯವಸ್ಥೆ ಏರ್ಪಾಡು ಮಾಡಲಾಗುವುದು. ವೇದಿಕೆ ಕಾರ್ಯಕ್ರಮವನ್ನು ವೀಕ್ಷಿಸಲು 3000 ಕುರ್ಚಿ ವ್ಯವಸ್ಥೆ ಮಾಡಲಾಗಿದೆ. ತರಳಬಾಳು ಶ್ರೀಗಳ ಅಮೃತಸ್ಥದಿಂದ " ಅಣ್ಣ ಬಸವಣ್ಣ " ಪುಸ್ತಕ ಬಿಡುಗಡೆ ಮಾಡಲಾಗುವುದು. ಬಸವೇಶ್ವರರ ಭಾವಚಿತ್ರ ಉತ್ಸವ ನಡೆಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿದೆ ಎಂದರು.  ಗೋಷ್ಠಿಯಲ್ಲಿ ಸಾಧು ವೀರಶೈವ ಸಮಾಜದ ಬಾಂದವರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ