Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಉಮೇಶ್ ಮೇಟಿ - ಸಮರ್ಥ್ ಶಾಮನೂರು

Advertisement

ಬೆಂಗಳೂರು: ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ನ ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರು ಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನೂತನ ಶಾಸಕರಿಗೆ ಸ್ಪೀಕರ್ ಖಾದರ್ ಶುಭ ಕೋರಿದರು.

ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಆರ್. ಪಾಟೀಲ್ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಬಿಕೆಎಸ್ ವಿರುದ್ಧದ ಪಂದ್ಯಕ್ಕೆ ಬೂಮ್ರಾ ನಾಯಕಸಾಮಾನ್ಯರಿಗೆ  ಕಾನೂನಿನ ಉರುಳು, ಬಲಿಷ್ಠನಿಗೆ ಅಧಿಕಾರದ ನೆರಳು: ಇದು ವ್ಯವಸ್ಥೆಯ ಅಟ್ಟಹಾಸ!ಭಾರತ ಎ, ತಂಡದಲ್ಲಿ ವೈಭವ್ ಸೂರ್ಯವಂಶಿಹಿಜಾಬ್ ಧರಿಸಿ ಬಂದರೆ ಎಲ್ಲಾ‌ ಶಾಲಾ‌-ಕಾಲೇಜುಗಳು ಕೇಸರಿಮಯವಾಗುತ್ತವೆ : ಕೆ. ಎಸ್ ಈಶ್ವರಪ್ಪ ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಉಮೇಶ್ ಮೇಟಿ - ಸಮರ್ಥ್ ಶಾಮನೂರುತಾಲೂಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆ  ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಕ್ರಮಕ್ಕೆ ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧಿಕಾರಿಗೆ ಮನವಿ ಗುರುಮಠಕಲ್ ಪಟ್ಟಣದಲ್ಲಿ ಇಂಧನ ಸಂಕಷ್ಟ: ಪೆಟ್ರೋಲ್-ಡೀಸೆಲ್ ಇಲ್ಲದೆ ವಾಹನ ಸವಾರರ ಪರದಾಟಮದ್ಯ ಖರೀದಿಗೆ ಕನಿಷ್ಠ 21 ವರ್ಷ ಕಡ್ಡಾಯ : ವಿಜಯ್ ಸರ್ಕಾರ ಅಧಿಕೃತ ಆದೇಶಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಪ್ರಹ್ಲಾದ್ ಜೋಶಿ ವಾಗ್ದಾಳಿ