ಬಾಗಲಕೋಟೆ: ಇಲ್ಲಿನ (Bagalakote) ನಾಗರಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (PKPS) ಆವರಣದಲ್ಲಿ ನಡೆದಿದೆ ಎನ್ನಲಾದ ಅನೈತಿಕ ಚಟುವಟಿಕೆ ಇಡೀ ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಸಂಸ್ಥೆಯ ಜವಾಬ್ದಾರಿಯುತ ಸ್ಥಾನದಲ್ಲಿರುವ ಆನಂದ ದೇಶಪಾಂಡೆ (Ananda deshapande) ಎಂಬುವವರು ಕೆಲಸದ ಅವಧಿಯಲ್ಲೇ ಕಚೇರಿಯೊಳಗೆ ಮಹಿಳೆಯೊಬ್ಬರ ಜೊತೆ ಆಕ್ಷೇಪಾರ್ಹ ರೀತಿಯಲ್ಲಿ ಕಾಲ ಕಳೆದಿರುವುದು ಬೆಳಕಿಗೆ ಬಂದಿದೆ.
ಸಾರ್ವಜನಿಕರ ನಂಬಿಕೆಗೆ ಪಾತ್ರವಾಗಬೇಕಾದ ಸರ್ಕಾರಿ ಸಂಬಂಧಿತ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.
ಈ ಘಟನೆಗೆ ಸಂಬಂಧಿಸಿದ CCTV ವಿಡಿಯೋ ತುಣುಕುಗಳು ಇಂಟರ್ನೆಟ್‌ನಲ್ಲಿ ವೇಗವಾಗಿ ಹರಡುತ್ತಿದ್ದು, ಗ್ರಾಮಸ್ಥರು ಇಂತಹ ಬೇಜವಾಬ್ದಾರಿ ನಡವಳಿಕೆಯ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
ಹೀಗೆ ನೈತಿಕತೆ ಮರೆತ ಅಧಿಕಾರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ಸಮಾಜದ ಘನತೆಗೆ ಕುಂದು ತಂದಿರುವ ಈ ಕೃತ್ಯವು ಸಹಕಾರಿ ವಲಯದಲ್ಲಿ ತೀವ್ರ ಮುಜುಗರ ಉಂಟುಮಾಡಿದೆ.


