ಚಿಕ್ಕೋಡಿ : ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ.ಬಿ ವೀರಪ್ಪ ಅವರು ಗುರುವಾರ(ಸೆ.24) ಚಿಕ್ಕೋಡಿಯ ಡಾ.ಬಿ.ಆರ್.ಅಂಬೇಡ್ಕರ ಮೆಟ್ರಿಕ ನಂತರದ ಬಾಲಕರ ವಸತಿ ನಿಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳಿಗೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ವಸತಿ ನಿಲಯದಲ್ಲಿನ ಕೊಣೆ, ಗ್ರಂಥಾಲಯ, ಅಡುಗೆ ಕೋಣೆ, ಆಹಾರ ಸಾಮಗ್ರಿ ದಾಸ್ತಾನು ಕೋಠಡಿಗಳನ್ನು ಪರಿಶೀಲಿಸಿ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು ವಸತಿ ನಿಲಯದಲ್ಲಿ ನೀಡಲಾಗುವ ಊಟ ಉಪಹಾರ, ಪ್ರಥಮ ಚಿಕಿತ್ಸೆ, ವಸತಿ ನಿಲಯಕ್ಕೆ ನಿಯಮಿತವಾಗಿ ವೈದ್ಯರು ಬರುವ ಕುರಿತು ಮಾಹಿತಿ ಪಡೆದು ವಸತಿ ನಿಲಯದಲ್ಲಿನ ವಿಧ್ಯಾರ್ಥಿಗಳು ಕಷ್ಟ ಪಟ್ಟು ಓದಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವುದರ ಮೂಲಕ ಸಧೃಡ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ನೀತಿ ಪಾಠ ಮಾಡಿದರು.
ವಸತಿ ನಿಲಯಕ್ಕೆ ಬರುವಂತಹ ರಸ್ತೆ ದುರಸ್ತಿ, ಬೀದಿ ದೀಪಗಳನ್ನು ಅಳವಡಿಸಲು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಅರವಿಂದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಲೋಕಾಯುಕ್ತ ಎಸ್.ಪಿ. ಪ್ರಸನ್ ದೇಸಾಯಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪ ವಿಭಾಗಾಧಿಕಾರಿ ಎಸ್.ಎಸ್.ಸಂಪಗಾವಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ತಹಶೀಲ್ದಾರ ಆರ್.ಆರ್.ಬುರ್ಲಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ


