ಬೈಲಹೊಂಗಲ: ನಗರದ ಬೆಳಗಾವಿ ರಸ್ತೆಯಲ್ಲಿರುವ ಬ್ಯಾಂಕ್ ವೊಂದರ ಮುಂಭಾಗದ ಖಾಲಿ ನಿವೇಶನದಲ್ಲಿ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಸೆ.10ರ ಪತ್ತೆಯಾಗಿದೆ.
ಮೃತದೇಹ ಸಂಪೂರ್ಣ ಕೊಳೆತು ನಾರುತ್ತಿದ್ದ ಕಾರಣ ಮುಖದ ಚಹರೆ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗಿಲ್ಲ.ಈ ಹಿನ್ನೆಲೆ ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಖಾಲಿ ಜಾಗದಲ್ಲಿ ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದರು.
ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ವ್ಯಕ್ತಿಯ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆ ಹಾಗೂ ಸಮಗ್ರ ಪೊಲೀಸ್ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


