Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದಿ ಕಲಿಯಲು ಮುಂದಾದ ಕೇಂದ್ರ ಸಚಿವ ಕುಮಾರಸ್ವಾಮಿ

Advertisement
ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ವಾರಾಂತ್ಯ ಬಿಟ್ಟು ಉಳಿದ ದಿನ ಹಿಂದಿ ಕಲಿಯಲು ಶುರು ಮಾಡಿದ್ದಾರೆ. ಪ್ರತಿದಿನ 90 ನಿಮಿಷಗಳ ಕಾಲ ಹಿಂದಿ ಕಲಿಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಸಚಿವರು ಇನ್ನು ಮುಂದೆ ಆನ್‌ಲೈನ್ ಮೂಲಕ ಹಿಂದಿಯನ್ನು ಕಲಿಯಲಿದ್ದಾರೆ.

ಹಿಂದಿ ಕಲಿಕೆಗಾಗಿಯೇ ಬೋಧಕರನ್ನು ನೇಮಿಸಿಕೊಂಡಿದ್ದು, ಹಿಂದಿ ಬರವಣಿಗೆ ಹಾಗೂ ಸುಲಭವಾಗಿ ಹಿಂದಿಯಲ್ಲಿ ಮಾತನಾಡುವುದನ್ನು ಅವರು ಹೇಳಿಕೊಡಲಿದ್ದಾರೆ. ಲೋಕ ಸಭೆಯಲ್ಲಿ ಹಿಂದಿಯಲ್ಲಿ ಮಾತನಾಡಲು ಹಾಗೂ ತಮ್ಮ ವಿಚಾರಗಳನ್ನು ಮಂಡಿಸಲು ಕಷ್ಟವಾಗುತ್ತಿರುವುದರಿಂದ ಕುಮಾರಸ್ವಾಮಿಯವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

ಹೆಚ್ಚಿನ ಸಂಸದರು ಹಿಂದಿಯಲ್ಲಿ ಮಾತನಾಡುತ್ತಾರೆ. ನನ್ನ ಸಚಿವಾಲಯದ ಎಲ್ಲ ಅಧಿಕಾರಿಗಳು ಹಿಂದಿಯಲ್ಲಿ ಮಾತನಾಡುತ್ತಾರೆ. ಹೀಗಾಗಿ ಹಿಂದಿ ಕಲಿಕೆ ನನಗೆ ಅನಿವಾರ್ಯವಾಗಿದೆ, ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.

1996 ರಲ್ಲಿ ಪ್ರಧಾನಿಯಾಗಿದ್ದ ಎಚ್‌ಡಿ ದೇವೇಗೌಡ ಅವರಿಗೂ ಹಿಂದಿ ಭಾಷೆಯ ಸಮಸ್ಯೆ ಕಾಡಿತ್ತು. 30 ದಿನಗಳಲ್ಲಿ ಹಿಂದಿ ಕಲಿಯಿರಿ ಎಂಬ ಪುಸ್ತಕ ಹಿಡಿದು ಓಡಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ಫೋಟೋ ತೆಗೆದಿದ್ದರು. ಆಗಿನ ಕಾಲದಲ್ಲಿಯೇ ಆ ಫೋಟೋ ಎಲ್ಲೆಡೆ ವೈರಲ್ ಆಗಿತ್ತು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ