Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫಂಡರಾಪುರಕ್ಕೆ ವಿಶೇಷ ರೈಲ್ವೆ : ಕಾಗೇರಿ ಮನವಿಗೆ ಕೇಂದ್ರ ಸಚಿವರ ಸ್ಪಂದನೆ

Advertisement
ನವದೆಹಲಿ:- ವಾರಕರಿ ಸಂಪ್ರದಾಯದವರು ಫಂದರಾಪುರ ವಾರಿ ಆಚರಣೆ ಹಿನ್ನೆಲೆಯಲ್ಲಿ ಫಂಡರಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಯಶವಂತಪುರ -ಫಂಡರಾಪುರ ಎಕ್ಸ್‌ಪ್ರೆಸ್ ರೈಲನ್ನು (ಸಂಖ್ಯೆ-16541) ವಾರಕ್ಕೊಮ್ಮೆ ಬದಲಾಗಿ ಜೂನ್ 25ರಿಂದ ಜುಲೈ 30ರ ವರೆಗೆ ಪ್ರತಿ ನಿತ್ಯ ಸಂಚರಿಸುವಂತೆ ಮಾಡಬೇಕೆನ್ನುವ ಉತ್ತರ ಕನ್ನಡ ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಮನವಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದಾರೆ.



ನವದೆಹಲಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಜೂನ್ 25ರಿಂದ ಜುಲೈ 30ರ ವರೆಗೆ ರೈಲು ಪ್ರತಿ ದಿನ ಚಲಿಸಿದರೆ ಅಪಾರ ಸಂಖ್ಯೆಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ಆದ್ದರಿಂದ ಈ ಮನವಿಯನ್ನು ಪರಿಗಣಿಸಿ ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ನಿತ್ಯ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ವಿನಂತಿಸಿದರು.

ತಕ್ಷಣ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್, ಈ ಬಗ್ಗೆ ಕೂಡಲೆ ಪರಿಶೀಲಿಸಿ ನಿತ್ಯ ರೈಲು ಓಡಿಸಲು ಕ್ರಮ ಕೈಗೊಳ್ಳಲಾಗುವುದು. ಒಂದೊಮ್ಮೆ ಅದೇ ರೈಲನ್ನು ನಿತ್ಯ ಓಡಿಸಲು ಸಾಧ್ಯವಾಗದಿದ್ದಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಚಿವರ ಈ ಭರವಸೆಯಿಂದಾಗಿ ಫಂಡರಾಪುರ ವಿಠ್ಠಲ ಭಕ್ತರಿಗೆ ಅನುಕೂಲವಾದಂತಾಗಿದೆ.

ನಿಟ್ಟೂರಿನ ರಮೇಶ್ ಎಸ್ ನಾರ್ವೇಕರ್ ಮತ್ತು ಖಾನಾಪುರದ ಶಾಂತಾರಾಮ ಗಂಗಾರಾಮ ಹೆಬ್ಬಾಳ್ಕರ್ ಅವರು, ಹುಬ್ಬಳ್ಳಿಯಿಂದ ಫಂಡರಾಪುರಕ್ಕೆ ರೈಲು ಸೇವೆಯ ಸಮಸ್ಯೆಯ ಕುರಿತು ವಾರಕರಿಯ ಸಂಪ್ರದಾಯದ ಜನರ ಪರವಾಗಿ ಕಾಗೇರಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಕಾಗೇರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.

ವರದಿ :-ಪ್ರತೀಕ ಚಿಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ