LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಾದವರ ಸಮಾಜದ ಮಕ್ಕಳಿಗೆ ಯುಪಿಎಸ್‌ ತರಬೇತಿ: ವಿಧಾನ ಪರಿಷತ್‌ ಸದಸ್ಯ ಡಿ.ಟಿ.ಶ್ರೀನಿವಾಸ.

Advertisement
ಚಿಕ್ಕೋಡಿ : ಹಣಬರ ಯಾದವ ಸಮಾಜದ ಮಕ್ಕಳು ಉನ್ನತ ಹುದ್ದೆಗಳಾದ ಯುಪಿಎಸ್ ಪರೀಕ್ಷೆಗಳಿಗೆ ಬೆಂಗಳೂರಿನಲ್ಲಿ ಶೀಘ್ರದಲ್ಲೆ ತರಬೇತಿ ಪ್ರಾರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಹಣಬರ ಸಂಘದ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಡಿ.ಟಿ.ಶ್ರೀನಿವಾಸ ಹೇಳಿದರು.

ಚಿಕ್ಕೋಡಿ ಲೋಕೊಪಯೋಗಿ ಲೋಕೊಪಯೋಗಿ ಇಲಾಖೆ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಹಣಬರ ಸಂಘದ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಶ್ರಮಿಸಿದವರಿಗೆ
ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು. ಉನ್ನತ ಹುದ್ದೆಗಳ ತರಬೇತಿ ಪಡೆಯುವರಿಗೆ ವಸತಿ ಸೌಲಭ್ಯ ನೀಡಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಬೆಳಗಾವಿ ನೆಲ ಐತಿಹಾಸಿಕವಾಗಿದೆ ಅದಕ್ಕಾಗಿ ಚಿಕ್ಕೋಡಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಮಾಡಲಾಗಿದೆ. ಗೊಲ್ಲ ಜಾತಿ ಎಲ್ಲಿವರಿಗೆ ಇರುತ್ತೆ ಅಲ್ಲಿವರಿಗೆ ಕೇಂದ್ರ-ರಾಜ್ಯ ಸರಕಾರದಿಂದ ನಿಗಮ ಮಂಡಳಿಗೆ 100 ಕೋಟಿ ಅನುದಾನ ಬರುತ್ತದೆ ಎಂದು ಹೇಳಿದರು.

ಚಿಕ್ಕೋಡಿಯಲ್ಲಿ ನಡೆದ ಕಾರ್ಯಕ್ರಮ ಐತಿಹಾಸಿಕವಾಗಿದೆ. ಜಾತಿಗಣತಿಯಲ್ಲಿ ಮುಖ್ಯ ಜಾತಿಯನ್ನು ಗೊಲ್ಲ ಎಂದು ಬರೆಯಿಸಬೇಕು. ಇದರ ಜೊತೆಗೆ ಉಪ ಜಾತಿ ನಮೂದು ಮಾಡಬೇಕು. ನಮ್ಮ ಸಮಾಜ ಬಾಂಧವರು ಮುಖ್ಯವಾಹಿನಿಗೆ ಬರಬೇಕಾದರೆ ಎಲ್ಲರೂ ಸಂಘಟಿತವಾದ ಹೋರಾಟ ಮಾಡಬೇಕಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಕಾರ್ಮಿಕ ಇಲಾಖೆ ಆಯುಕ್ತ ಸಂಜಯ ಶಿಂಧಿಹಟ್ಟಿ ಮಾತನಾಡಿದರು. ಭರಮ ತೊಳ್ಳಿ, ಜಯಗೌಡ ಪಾಟೀಲ, ಎಸ್.ಬಿ. ಪಾಟೀಲ, ಸಚಿನ ಖೋತ, ಬೆಳಗಾವಿ ಜಿಲ್ಲಾ ಹಣಬರ ಯಾದವ ಸಂಘದ ಜಿಲ್ಲಾಧ್ಯಕ್ಷ ಶೀತಲ ಮುಂಡೆ, ಡಾ.ವೆಂಕಟೇಶ ಶಿಂಧಿಹಟ್ಟಿ, ರಾಜೇಶ ಪಾಟೀಲ, ರಾಜು ಹಮ್ಮನ್ನವರ, ವಸಂತ ಖೋತ, ಎಸ್.ಬಿ. ಮದಿಹಳ್ಳಿ ಉಪಸ್ಥಿತರಿದ್ದರು. ಶಿವಲಿಂಗ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು. ರಾಮು ಮದಿಹಳ್ಳಿ ನಿರೂಪಿಸಿದರು.

ವರದಿ : ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ