ಬೆಂಗಳೂರು : ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಹಾಗೂ ನಿಯಮಗಳನ್ನು ಪಾಲಿಸಬೇಕು ಎಂಬ ಸರ್ಕಾರದ ನಿಲುವನ್ನು RSS ಅನ್ನು ಗುರಿಯಾಗಿಸಿಕೊಂಡ ಕ್ರಮ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದಂತೆ ಕಾನೂನು, ನಿಯಮಗಳನ್ನು ಪಾಲಿಸಬೇಕು ಎಂದ ತಕ್ಷಣ ಬಿಜೆಪಿಯವರು ಇದನ್ನು RSSಗೆ ಹೇಳಲಾಗಿದೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
'ಕುಂಬಳಕಾಯಿ ಕದ್ದವರಿಗೆ ಮಾತ್ರ ಹೆಗಲು ಮುಟ್ಟಿ ನೋಡಿಕೊಳ್ಳುವಂತಹ ಆತಂಕ ಇರುತ್ತದೆ' ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಅಶೋಕ್ ಹೇಳಿಕೆಗೆ ಖರ್ಗೆ ತೀವ್ರ ಪ್ರತಿಕ್ರಿಯೆ
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, RSS ಅನ್ನು ಎದುರು ಹಾಕಿಕೊಂಡರೆ ಮನೆಯಿಂದ ಹೊರಗೆ ಬರಲು ಸಾಧ್ಯವಾಗುವುದಿಲ್ಲ ಎಂಬರ್ಥದ ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಿರುವ ಪ್ರಿಯಾಂಕ್ ಖರ್ಗೆ, ಇಂತಹ ಹೇಳಿಕೆಗಳ ಹಿಂದಿನ ಅರ್ಥವೇನು ಎಂದು ಪ್ರಶ್ನಿಸಿದ್ದಾರೆ.


