LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಾಲ್ಮೀಕಿ ರಾಮಾಯಣದ ಮೌಲ್ಯಗಳು ನಮ್ಮ ಬದುಕಿಗೆ ದಾರಿದೀಪ : ಸುನಿಲ್ ಕುಮಾರ್

Advertisement

ತುರುವೇಕೆರೆ: ತಾಲ್ಲೂಕು ಆಡಳಿತ, ವಾಲ್ಮೀಕಿ ಸಮಾಜದ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಮಿನಿವಿಧಾನಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ನೀಡಿದ ಗ್ರೇಡ್ 2 ತಹಸೀಲ್ದಾರ್ ಸುನಿಲ್ ಕುಮಾರ್, ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆಯಾಗಿದೆ. ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣದಲ್ಲಿ ಉಲ್ಲೇಖಿಸಿರುವ ತತ್ವ, ಆದರ್ಶಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ. ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರಿದೀಪವಾಗಿವೆ ಎಂದರು.

ವಾಲ್ಮೀಕಿ ಸಮಾಜದ ಗೌರವಾಧ್ಯಕ್ಷ ಆನಂದರಾಜು ಮಾತನಾಡಿ, ವಾಲ್ಮೀಕಿ ರಾಮಾಯಾಣದಲ್ಲಿನ ರಾಮ, ಸೀತೆ, ಲಕ್ಷ್ಮಣ, ಆಂಜನೇಯನ ಪಾತ್ರಗಳು ಇಂದಿಗೂ ಜನರ ಬದುಕಿನಲ್ಲಿ ಹಸಿರಾಗಿದೆ. ರಾಮನ ಜೀವನ ಚರಿತ್ರೆ, ರಾಮನ ಆದರ್ಶನೀಯ ಗುಣಗಳು ಸಾರ್ವಕಾಲಿಕ ಸತ್ಯವಾಗಿದೆ. ಮಹನೀಯರ ಜಯಂತಿಗಳು ಕೇವಲ ಆಚರಣೆಗಷ್ಟೇ ಸೀಮಿತವಾಗದೆ ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು. 

ಕಸಾಪ ಮಾಯಸಂದ್ರ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು ಮಾತನಾಡಿ, ಮಹರ್ಷಿ ವಾಲ್ಮೀಕಿರವರು ರಚಿಸಿದ ರಾಮಾಯಣ ಮಹಾಕಾವ್ಯವು ಭ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ, ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ವಿಶ್ವಕ್ಕೆ ಪರಿಚಯಿಸಿದೆ ಎಂದರು.

ವಾಲ್ಮೀಕಿ ಸಮಾಜದ ಅಧ್ಯಕ್ಷ ವಸಂತಕುಮಾರ್ ಮಾತನಾಡಿ, ವಾಲ್ಮೀಕಿ ಸಮಾಜಕ್ಕೆ ಬಹುದೊಡ್ಡ ಸಾಂಸ್ಕೃತಿಕ ಪರಂಪರೆ ಇದ್ದು, ಅದನ್ನು ಜತನದಿಂದ ಕಾಪಾಡಿಕೊಂಡು ಹೋಗಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಅನ್ಯ ಸಮುದಾಯಗಳ ಜತೆ ಸ್ನೇಹ-ವಿಶ್ವಾಸದಿಂದ ಇದ್ದು ಸೌಹಾರ್ದತೆಯುತ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ ಎಂದರು. ಮಹರ್ಷಿ ವಾಲ್ಮೀಕಿಯವರ ಜಯಂತಿಯ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಿಸಿ, ಸರ್ಕಾರದ ವತಿಯಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ. ತಾಲ್ಲೂಕು ಆಡಳಿತ ಪ್ರತಿ ವರ್ಷ ಗೌರವಯುತವಾಗಿ ವಾಲ್ಮೀಕಿ ಅವರ ಜಯಂತಿಯನ್ನು ನಡೆಸುತ್ತಾ ಬಂದಿದ್ದು ಸಮುದಾಯದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬಿಇಒ ಸೋಮಶೇಖರ್, ಇಒ ಅನಂತರಾಜು, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಕಂದಾಯ ನಿರೀಕ್ಷಕ ಪ್ರಶಾಂತ್ ಭದ್ರಣ್ಣನವರ್, ಸಮಾಜ ಕಲ್ಯಾಣಾಧಿಕಾರಿ ರಮೇಶ್ ನಾಯಕ್, ಸರ್ವೆ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್,  ಬಿಸಿಎಂ ಅಧಿಕಾರಿ ದೊಡ್ಡೇಗೌಡ, ಆಹಾರ ಇಲಾಖೆಯ ಕೃಷ್ಣೇಗೌಡ, ವೈದ್ಯಾಧಿಕಾರಿ ಡಾ.ರಂಗನಾಥ್, ಕೃಷಿ ಇಲಾಖೆಯ ಮನೋಹರ್, ವಾಲ್ಮೀಕಿ ಸಮಾಜದ ಕಾರ್ಯದರ್ಶಿ ಶಿವಣ್ಣ, ಖಜಾಂಚಿ ಗಂಗರಂಗಣ್ಣ, ಸಹಕಾರ್ಯದರ್ಶಿ ಶಿವಣ್ಣ, ವಾಲ್ಮೀಕಿ ಸಮಾಜದ ಮುಖಂಡರಾದ ಶಂಕರಪ್ಪ, ಶ್ರೀನಿವಾಸ್, ಕಲ್ಪನಾಮುನಿರಾಜು, ಶೀಲಾಶಿವಪ್ಪನಾಯಕ, ಗೋವಿಂದಪ್ಪ, ಧನಂಜಯ, ಗಿರೀಶ್ ಆಚಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ : ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST