ಹಾವೇರಿ: ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹೆಡ್ ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.
ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರ್ತವ್ಯ ಲೋಪದ ಆರೋಪದ ಮೇಲೆ ಹೆಡ್‌ಕಾನ್ಸ್‌ಟೆಬಲ್‌ಗಳಾದ ಮರೆಣ್ಣವರ, ಹೊನ್ನಾಳಿ, ಮಣಕವಾಡ ಮತ್ತು ನಾಗನೂರು ಅವರನ್ನು ಅಮಾನತುಗೊಳಿಸಲಾಗಿದೆ.
ಅಲ್ಲದೆ, ಪರೀಕ್ಷಾ ಕರ್ತವ್ಯದಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ನಾಲ್ವರು ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಓರ್ವ ಸಿಪಿಐ ಹಾಗೂ ಇಬ್ಬರು ಪಿಎಸ್‌ಐಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.


