ಕೇರಳ : ತಿರುವನಂತಪುರಂನಲ್ಲಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರೊಂದಿಗೆ ಇನ್ನು 20 ಸಚಿವ ಸಂಪುಟ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಸಿದ್ದರು.

