ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಉಪಸಭಾಪತಿಯಾಗಿ ಹಿರಿಯ ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ವಿಧಾನಪರಿಷತ್‌ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಉಮಾಶ್ರೀ ಅವರ ಆಯ್ಕೆಗೆ ಎಲ್ಲಾ ಪಕ್ಷಗಳ ಸದಸ್ಯರು ಬೆಂಬಲ ಸೂಚಿಸಿದರು.ಈ ಮೂಲಕ ಅವರು ವಿಧಾನಪರಿಷತ್‌ನ ಉಪಸಭಾಪತಿ ಸ್ಥಾನವನ್ನು ಅಲಂಕರಿಸಿದ್ದಾರೆ.
ನಟಿ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಉಮಾಶ್ರೀ ಅವರು ಈ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ವಿಧಾನಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾಗಿರುವುದು ಅವರ ರಾಜಕೀಯ ಜೀವನದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿಯಾಗಿದೆ.
ಉಮಾಶ್ರೀ ಅವರ ಆಯ್ಕೆಗೆ ಹಲವು ಸದಸ್ಯರು ಅಭಿನಂದನೆ ಸಲ್ಲಿಸಿದ್ದು, ಸದನದ ಕಲಾಪಗಳನ್ನು ಪರಿಣಾಮಕಾರಿಯಾಗಿ ನಡೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.


