ಧಾರವಾಡ: ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯ ಹಿಂಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳ್ಳತನ ಮಾಡಿದ್ದ ಪ್ರಕರಣವನ್ನು ಧಾರವಾಡ ವಿದ್ಯಾಗಿರಿ ಪೊಲೀಸರು ಭೇದಿಸಿದ್ದಾರೆ.
ಪೊಲೀಸ್ ಪ್ರಕಟಣೆಯ ಪ್ರಕಾರ, ದಿನಾಂಕ 19-11-2026ರಂದು ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿತ್ತು. ಈ ಕುರಿತು ದಾಖಲಾದ ಅಪರಾಧ ಸಂಖ್ಯೆ 171/2026ರ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 305(a) ಹಾಗೂ 331(4) ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳ್ಳತನವಾಗಿದ್ದ ಸುಮಾರು 55 ಗ್ರಾಂ ತೂಕದ ಚಿನ್ನಾಭರಣ ಹಾಗೂ ₹16,000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಪೊಲೀಸರ ಈ ಕಾರ್ಯಾಚರಣೆಯಿಂದ ಮನೆ ಕಳ್ಳತನ ಪ್ರಕರಣ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ: ಗುರುರಾಜ ಹಂಚಾಟೆ

