Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕಾರ 

Advertisement

ಚೆನ್ನೈ: ಕಳೆದ ಎರಡು ದಿನಗಳಿಂದ ಇಡೀ ದೇಶದ ಗಮನ ತಮಿಳುನಾಡು ರಾಜಕೀಯದತ್ತ ನೆಟ್ಟಿದೆ. ದ್ರಾವಿಡ ಕೋಟೆಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳನ್ನು ಮಣಿಸಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ನೇತೃತ್ವದ ಟಿವಿಕೆ (Tamilaga Vettri Kazhagam) ಈಗ ಸರ್ಕಾರ ರಚನೆಗೆ ಸಜ್ಜಾಗಿದೆ.

ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಒಟ್ಟು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೂ, ಟಿವಿಕೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿರುವ ವಿಜಯ್, ಬಹುಮತ ಸಾಬೀತುಪಡಿಸಲು ಎರಡು ವಾರಗಳ ಕಾಲಾವಕಾಶ ಕೋರಿದ್ದಾರೆ ಎಂದು ವರದಿಯಾಗಿದೆ.

ನಾಳೆಯೇ ಮುಹೂರ್ತ ನಿಗದಿ?

ವಿಶೇಷವೆಂದರೆ, ವಿಜಯ್ ಅವರು ಮೇ 7ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. 2021ರಲ್ಲಿ ಎಂ.ಕೆ. ಸ್ಟಾಲಿನ್ ಅವರು ಕೂಡ ಇದೇ ಮೇ 7ರಂದು ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಅದೇ ದಿನಾಂಕದಂದು ತಾವೂ ಪದಗ್ರಹಣ ಮಾಡುವ ಮೂಲಕ ವಿಜಯ್ ಹೊಸ ರಾಜಕೀಯ ಪರ್ವಕ್ಕೆ ಮುನ್ನುಡಿ ಬರೆಯಲಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಯುವಕರ ಮೇಲೆ ತಲ್ವಾರ್ ದಾಳಿ ಕೇಸ್ : ಒಂದೇ ತಾಸಿನಲ್ಲಿ ಆರೋಪಿಗಳು ಅರೆಸ್ಟ್ ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕಾರ ಬೇವನೂರು ಗ್ರಾಮದ ಅಮೋಘಸಿದ್ದೇಶ್ವರ ಜಾತ್ರಾ ಮಹೋತ್ಸವ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯಿಂದ ಉಚಿತ ಆರೋಗ್ಯ ಶಿಬಿರ. ಚೇಳೂರು ಸರ್ಕಾರಿ ಆಸ್ಪತ್ರೆಗೆ ಬೇಕಿದೆ ಕಾಯಕಲ್ಪ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಗಿಗಳ ಪರದಾಟ.ಕಸ್ಕೋಟ ಸಸ್ಯರೋಗದಿಂದ ಬೆಳೆಹಾನಿ ಸಂಕಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು:ಗೋಪಾಲ ಎಂ ಪಿಎರಡು ಬಲಿಷ್ಠ ಬ್ಯಾಟಿಂಗ್ ತಂಡಗಳ ಕಾದಾಟ ಇಂದುಚೆನ್ನೆöÊ ಸೂಪರ್ ಕಿಂಗ್ಸ್ ತಂಡಕ್ಕೆ ಮಹತ್ವದ ಗೆಲುವುಜಾತಿ ನಿಂದನೆ : ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಜಾತಿ ನಿಂದನೆ : ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ