LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಸಿ ರಸ್ತೆ ಉದ್ಘಾಟಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

Advertisement
--ಇಲಕಲ್ಲದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಭೂಮಿ ಪೂಜೆ  

ಇಲಕಲ್ಲ: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಪತ್ತಿನ ಸಹಕಾರ ಸಂಘ ನಿಯಮಿತದಿಂದ ನಿರ್ಮಿಸಲಾಗುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಕಾಲೋನಿಯಲ್ಲಿ ನಿರ್ಮಾಣಗೊಂಡ ಸಿಸಿ ರಸ್ತೆಯ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಡಾ. ವಿಜಯಾನಂದ ಎಸ್. ಕಾಶಪ್ಪನವರ್ ಅವರು ತಮ್ಮ ಅಮೃತ ಹಸ್ತದಿಂದ ಭೂಮಿ ಪೂಜೆ ನೆರವೇರಿಸಿ, ಸಿಸಿ ರಸ್ತೆಗೆ ಉದ್ಘಾಟನೆ ನೀಡಿದರು. ಅವರು ಮಾತನಾಡುತ್ತಾ, “ಅಂಬೇಡ್ಕರ್ ಕಾಲೋನಿಯ ಅಭಿವೃದ್ಧಿಗೆ ಇನ್ನಷ್ಟು ಯೋಜನೆಗಳನ್ನು ತರುವ ನಿರ್ಧಾರವಿದೆ. ಸಮಾಜದ ಒಳಿತಿಗಾಗಿ ಈ ಭಾಗದಲ್ಲಿ ಬಲವಾದ ಮೂಲಸೌಕರ್ಯಗಳನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದರು.



ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಶರಣಪ್ಪ ಆಮದಿಹಾಳ, ಉಪಾಧ್ಯಕ್ಷರಾದ ಯುವರಾಜ್ ಚಲವಾದಿ, ನಗರಸಭೆ ಸದಸ್ಯ ಸುರೇಶ್ ಜಂಗ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜಾಕ್ ತಟ್ಗಗಾರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಅಂಬಣ್ಣ ಚಲವಾದಿ, ರವಿ ಬೇಗಾರ, ಯಮನೂರ್ ದೊಡ್ಡಮನಿ, ಗೈಬು ಚಲವಾದಿ, ಯಮನಪ್ಪ ಬೀಳಗಿ, ಸಂಗಮೇಶ್ ಜಂಗ್ಲಿ, ದಿಲೀಪ್ ಕಲ್ಮನಿ, ಹನುಮಂತ್ ಹಿರೇಮನಿ, ಪ್ರವೀಣ್ ಹೋಳಿ, ಸಿದ್ಧಾರ್ಥ ಚಲವಾದಿ, ಮಾಳವ್ವ ಜಂಗ್ಲಿ, ಹುಲ್ಲವ್ವ ನಂದವಾಡಗಿ, ಸಂಗಮ್ಮ ರೋಣದ, ನಿರ್ಮಲ ಕಳ್ಳಿ ಇನ್ನು ಮುಂತಾದರೂ ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ