
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ- ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ನೀಡಬೇಕು, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮಾರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಪೋನ್ 12ಜಿಬಿ/256ಜಿಬಿ. ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್/ಲಾಪ್ಯ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾರ್, ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಯಲ್ಲಿ ವಂಚಿತರಾಗಿ ಸುಮಾರು 30 ವರ್ಷಗಳ ಮೇಲ್ಪಟ್ಟ ಪದೋನತಿಯನ್ನು ನಿವೃತ್ತಿ ಅಂಚಿನಲ್ಲಿ ಪಡೆಯುತ್ತಿವುದರಿಂದ ರಾಜ್ಯಾದಲ್ಲಿನ 1196 ಗ್ರೇಡ್-1 ಗ್ರಾಮ ಪಂಚಾಯತ್ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರಿಕ್ಷಕರು/ಪ್ರಥಮ ದರ್ಜೆ ಸಹಾಯಕರು/ಗ್ರೇಡ್ -1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರೀಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿಯನ್ನು ನೀಡಬೇಕು.
ಬೆಳೆ ಸಮೀಕ್ಷೆ ಹಾಗೂ ಬೆಳೆ .ಹಾನಿ ಪರಿಹಾರದ ಕೆಲಸವನ್ನು ಕೃಷಿ/ತೋಟಗಾರಿಕೆಗೆ ಇಲಾಖೆಗೆ ನಿರ್ವಸಹಿಸುವಂತೆ ಆದೇಶಿಸುವ ಬಗ್ಗೆ, ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಸೂಕ್ತ ಆದೇಶ ನೀಡಬೇಕು, ಇನ್ನೂ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಸಂಘದ ಅಧ್ಯಕ್ಷರಾದ ಶ್ರೀ ರವೀಂದ್ರ ಜಾದವ ಅವರು ಮಾತನಾಡಿದರು. ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘ ಮತ್ತು ಆರೋಗ್ಯ ಇಲಾಖೆಯವರು ಬೆಂಬಲ ನೀಡಿದರು ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ:- ಬಸವರಾಜ ಭೀಮರಾಣಿ.ಜಗದೀಶ ಕಡೋಲಿ

