Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ಬಾರಿ ಸಚಿವ ಸ್ಥಾನ ನನಗೂ ಕೊಡ್ತಾರೆ..ಕೊಡಲೇ ಬೇಕು : ವಿನಯ್ ಕುಲಕರ್ಣಿ 

Advertisement
ಧಾರವಾಡ : ಈ ಬಾರಿ ಸಚಿವ ಸ್ಥಾನ ನನಗೂ ಕೊಡ್ತಾರೆ..ಕೊಡಲೇ ಬೇಕು. ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನಿಶ್ಚಿತವಾಗಿಯೂ ನನಗೆ ಸಚಿವ ಸ್ಥಾನ ಕೊಡಲಿದ್ದಾರೆ.ಮಾರ್ಚ್​ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.


ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಅಧಿಕಾರದ ಹಂಚಿಕೆ ಚರ್ಚೆ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಅವಧಿಗೋ ಇಲ್ಲ ಸಿಎಂ ಬದಲಾವಣೆಯೋ ಎಲ್ಲವೂ ನಮ್ಮ ಹೈಕಮಾಂಡ್​​ಗೆ ಬಿಟ್ಟ ವಿಚಾರ.


ನಾನು ಆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಮುಂದಿನ ಅವಧಿಯವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆಂಬ ಸಚಿವ ಶಿವಾನಂದ ಪಾಟೀಲ್ ಅವರು ಹೇಳಿದ್ದೂ ನನಗೆ ಗೊತ್ತಿಲ್ಲ ಎಂದರು.


ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಚೇಂಜ್ ಎಂಬ ಚರ್ಚೆಯ ವಿಚಾರಗಳು ನನ್ನ ಗಮನಕ್ಕೆ ಇಲ್ಲ. ಪಕ್ಷದಲ್ಲಿ ನನಗೆ ಏನು ಜವಾಬ್ದಾರಿ ಕೊಟ್ಟಿದ್ದಾರೋ ಅದನ್ನು ಮಾಡುವೆ. ಏನೇ ನಿರ್ಧಾರಗಳಿರಲಿ… ಅದೆಲ್ಲವೋ ದೊಡ್ಡವರಿಗೆ ಸಂಬಂಧಿಸಿದೆ. ಹೈಕಮಾಂಡ್​ ಯಾವ ನಿರ್ಧಾರ ಕೈಗೊಳ್ಳುತ್ತೇ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.


ಇನ್ನು ಕೋಲಾರದಲ್ಲಿ ನಾಲ್ವರು ಶಾಸಕರು ಇದ್ದೇವೆ. ಜಿಲ್ಲೆಗೆ ಈ ಬಾರಿ ಒಂದಾದರೂ ಸಚಿವ ಸ್ಥಾನ ನೀಡುವ ಭರವಸೆ ಇದೆ. ನನಗೆ ಸಚಿವ ಸ್ಥಾನ ಸಿಕ್ಕರೂ, ಬೇರೆಯವರಿಗೆ ಸಿಕ್ಕರೂ ಸಂತೋಷ ಎಂದು ಮಾಲೂರು ಶಾಸಕ ನಂಜೇಗೌಡ ಅವರು ಕೋಲಾರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್