ನವದೆಹಲಿ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಮೇಲ್ಮನವಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ಪ್ರಕಟಿಸಲಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪಾತ್ರದ ಕುರಿತು ತನಿಖೆ ನಡೆಸಿರುವ ಸಿಬಿಐ, ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಲಿರುವುದರಿಂದ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮುಂದುವರಿಯಲಿದೆಯೇ ಅಥವಾ ಜಾಮೀನು ರದ್ದಾಗಲಿದೆಯೇ ಎಂಬ ಕುತೂಹಲ ಮೂಡಿದೆ.


