Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ 

Advertisement
ಧಾರವಾಡ: ಧಾರವಾಡ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬಂದಿದೆ.

ಇಂದು (ಏಪ್ರಿಲ್ 17) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.

ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಅದರಂತೆ ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆ ವಿನಯ್​ ಕುಲಕರ್ಣಿ ಅವರ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ. ಕೋರ್ಟ್ ತನ್ನ ತೀರ್ಪಿನ ಪ್ರತಿಯನ್ನು ಸ್ಪೀಕರ್ ಗೆ ಕಳುಹಿಸಲಿದ್ದು, ಆ ಬಳಿಕ ಸ್ಫೀಕರ್ ಅಧಿಕೃತವಾಗಿ ವಿನಯ್ ಕುಲಕರಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಿದ್ದಾರೆ.

ಕಾನೂನು ಪ್ರಕಾರ ಶಿಕ್ಷೆ ಪ್ರಕಟವಾದ ದಿನದಿಂದಲೇ ಶಾಸಕ ಸ್ಥಾನದಿಂದ ತಕ್ಷಣವೇ ಅನರ್ಹವಾಗುತ್ತೆ. 'ಜನಪ್ರತಿನಿಧಿ ಕಾಯ್ದೆ 1951'ರ ಸೆಕ್ಷನ್ 8(3) ರ ಪ್ರಕಾರ, ಯಾವುದೇ ಶಾಸಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ.

2013ರ 'ಲಿಲಿ ಥಾಮಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ' ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪಿನ ಪ್ರಕಾರ ಮೇಲ್ಮನವಿ ಸಲ್ಲಿಸಲು ನೀಡಲಾಗುತ್ತಿದ್ದ 3 ತಿಂಗಳ ಕಾಲಾವಕಾಶವನ್ನು ರದ್ದುಪಡಿಸಲಾಗಿದೆ. ಹಾಗಾಗಿ, ಶಿಕ್ಷೆಯಾದ ತಕ್ಷಣ ಅನರ್ಹತೆ ಅನ್ವಯವಾಗುತ್ತದೆ.

ಜೈಲು ಶಿಕ್ಷೆಯ ಅವಧಿಯನ್ನು ಪೂರೈಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶವಿರುವುದಿಲ್ಲ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಕಾರಣ, ಉನ್ನತ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸದ ಹೊರತು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದು ಅಸಾಧ್ಯ. ಇನ್ನು ಶಾಸಕತ್ವ ಅಧಿಕೃತವಾಗಿ ಅನರ್ಹಗೊಂಡ ತಕ್ಷಣ ಕ್ಷೇತ್ರ ಖಾಲಿಯಾಗಲಿದೆ. ವಿಧಾನಸಭಾ ಸಚಿವಾಲಯದಿಂದ ಕ್ಷೇತ್ರ 'ಖಾಲಿ' ಇದೆ ಎಂದು ಘೋಷಣೆಯಾಗಲಿದ್ದು, ಬಳಿಕ ಚುನಾವಣಾ ಆಯೋಗ 6 ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸುವ ಸಾಧ್ಯತೆ ಇದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ