Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಮತದಾರರು ಸಹಕರಿಸಿ : ಮಂಜುನಾಥ್

Advertisement

ತುರುವೇಕೆರೆ : ಜೂನ್ 30 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026 ಆರಂಭವಾಗಲಿದೆ. ಒಂದು ತಿಂಗಳ ಕಾಲ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಲಿದ್ದು, ಮತಗಟ್ಟೆ ಅಧಿಕಾರಿಗಳು ನೀಡುವ ಗಣತಿ ನಮೂನೆಯನ್ನು ಮತದಾರರು ತಪ್ಪದೇ ಭರ್ತಿ ಮಾಡಿ ನೀಡಬೇಕೆಂದು ಮತದಾರರ ನೋಂದಣಾಧಿಕಾರಿ ಮಂಜುನಾಥ್ ತಿಳಿಸಿದರು. 

ತಾಲೂಕು ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 224 ಮತಗಟ್ಟೆಗಳಿದ್ದು, 224 ಮತಗಟ್ಟೆ ಅಧಿಕಾರಿಗಳು ಹಾಗೂ 23 ಮೇಲ್ವಿಚಾರಕರು ಈ ಪರಿಷ್ಕರಣೆ ಕಾರ್ಯದಲ್ಲಿ ತೊಡಗಲಿದ್ದಾರೆ. ಜೂನ್ 20 ರಿಂದ 29 ರವೆರೆಗೆ ತರಬೇತಿ, ಜೂನ್ 30 ರಿಂದ ಜುಲೈ 29 ರವರೆಗೆ ಮತಗಟ್ಟೆ ಅಧಿಕಾರಿಗಳ ಮನೆಮನೆ ಭೇಟಿ, ಜುಲೈ 29 ರಂದು ಮತಗಟ್ಟೆಗಳ ಕ್ರಮಬದ್ಧಗೊಳಿಸುವಿಕೆ, ಆಗಸ್ಟ್ 05 ರಂದು ಮತದಾರರ ಕರಡುಪಟ್ಟಿ ಪ್ರಕಟ, ಆಗಸ್ಟ್ 05 ರಿಂದ ಸೆಪ್ಟಂಬರ್ 04 ರವರೆಗೆ ಆಕ್ಷೇಪಣೆಗಳಿಗೆ ಅವಕಾಶ, ಆಗಸ್ಟ್ 05 ರಿಂದ ಅಕ್ಟೋಬರ್ 03 ರವರೆಗೆ ಆಕ್ಷೇಪಣೆಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಹಾಗೂ ಅಕ್ಟೋಬರ್ 07 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು. 

ಜೂನ್ 30 ರಿಂದ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಮಾಹಿತಿಯ ಗಣತಿ ನಮೂನೆ ನೀಡಲಿದ್ದು, ಮತದಾರರು ಕಡ್ಡಾಯವಾಗಿ ನಮೂನೆಯನ್ನು ಭರ್ತಿ ಮಾಡಿ ಅಧಿಕಾರಿಗಳಿಗೆ ನೀಡಬೇಕಿದೆ. ನಮೂನೆಯ ದ್ವಿಪ್ರತಿಯನ್ನು ನೀಡಲಿದ್ದು ಒಂದು ಪ್ರತಿಯನ್ನು ಸ್ವೀಕೃತಿಯಾಗಿ ಮತದಾರರು ತಮ್ಮಲ್ಲೇ ಉಳಿಸಿಕೊಳ್ಳಬೇಕು. 18 ವರ್ಷ ಮೇಲ್ಟಟ್ಟವರು, ಮನೆಯ ಮುಖ್ಯಸ್ಥರು ನಮೂನೆಗೆ ಸಹಿ ಮಾಡಬಹುದಾಗಿದೆ. ಬಿಎಲ್ಒಗಳು ಪ್ರತಿ ಮತದಾರರ ಮನೆಗೆ ಮೂರು ಬಾರಿ ಭೇಟಿ ಮಾಡಲಿದ್ದು, ಮಾಹಿತಿ ನೀಡಬಹುದಾಗಿದೆ. ಮತದಾರರು ಮೂರೂ ಬಾರಿಯೂ ಮತದಾರರು ಲಭ್ಯವಿಲ್ಲದಿದ್ದಲ್ಲಿ ಆ ಮತದಾರರನ್ನು ಗೈರು, ವರ್ಗ, ಮರಣ, ನಕಲು ಈ ವರ್ಗಕ್ಕೆ ಸೇರ್ಪಡೆ ಮಾಡಲಾಗುವುದು. 2026 ರ ಅಕ್ಟೋಬರ್ 01 ಕ್ಕೆ 18 ವರ್ಷ ಪೂರ್ಣಗೊಂಡ ಮತದಾರರನ್ನು ಸೇರ್ಪಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. 

ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಇಲ್ಲಿ ಕೇವಲ ಮತದಾರರ ಹೆಸರು ಸೇರ್ಪಡೆ, ತೆಗೆಯುವುದು, ವಿಳಾಸ ಬದಲಾವಣೆ ನಡೆಯುತ್ತದೆ. ಯಾವೊಬ್ಬ ಮತದಾರರೂ ಮತದಾನದಿಂದ ಹೊರಗುಳಿಯಬಾರದು ಹಾಗೂ ಪ್ರತಿಯೊಬ್ಬರಿಗೂ ಮುಕ್ತ, ನ್ಯಾಯಸಮ್ಮತ ಚುನಾವಣೆಯಲ್ಲಿ ಭಾಗವಹಿಸುವ ಅವಕಾಶ ದೊರಕಿಸುವಂತೆ ಮಾಡುವ ಉದ್ದೇಶದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮಾಡಲಾಗುತ್ತಿದೆ ಎಂದ ಅವರು, ಪರಿಷ್ಕರಣೆ ಕಾರ್ಯದಲ್ಲಿ ಅರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ತೆಗೆಯುವುದಿಲ್ಲ. ಈ ಬಗ್ಗೆ ನಾಗರೀಕರಲ್ಲಿ ಆತಂಕ ಬೇಡ. ಮತದಾರರು ಯಾವುದೇ ಆತಂಕವಿಲ್ಲದೆ ಪರಿಷ್ಕರಣೆ ಕಾರ್ಯದಲ್ಲಿ ಪಾಲ್ಗೊಂಡು ಮತಗಟ್ಟೆ ಅಧಿಕಾರಿಗಳು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕೆಂದರು. 

ಸಹಾಯಕ ಮತದಾರರ ನೋಂದಣಾಧಿಕಾರಿ ಕುಂಇ ಅಹಮದ್ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,83,413 ಮಂದಿ (90436 ಪುರುಷರು, 92977 ಮಹಿಳೆಯರು) ಮತದಾರರಿದ್ದು, ಈವರೆಗೆ ಶೇ. 93.38 ರಷ್ಟು ಮಂದಿಯನ್ನು ಮ್ಯಾಪಿಂಗ್ ಮಾಡಲಾಗಿದೆ. ಕ್ಷೇತ್ರದಲ್ಲಿ 731 ವಿಐಪಿ, ವಿವಿಐಪಿ (404 ಪುರುಷರು, 327 ಮಹಿಳೆಯರು) ಮತದಾರರೆಂದು ಗುರುತಿಸಲಾಗಿದೆ. 2960 ಮಂದಿ ವಿಶೇಷಚೇತನ (1672 ಪುರುಷರು, 1288 ಮಹಿಳೆಯರು) ಮತದಾರರಿದ್ದಾರೆ. ಮೃತಪಟ್ಟವರ ಹೆಸರು ಕೈಬಿಡುವ, 18 ವರ್ಷ ಮೇಲ್ಪಟ್ಟವರ ಸೇರ್ಪಡೆಗೊಳಿಸುವ, ಸ್ಥಳಾಂತರಗೊಂಡ ಮತದಾರರ ಪರಿಷ್ಕರಣೆ ಆಗಲಿದೆ. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಮನೆಮನೆಗೆ ಭೇಟಿ ನೀಡುವ ಅಧಿಕಾರಿಗಳಿಗೆ ಚುನಾವಣಾ ಆಯೋಗ ನಿರ್ದಿಷ್ಟಪಡಿಸಿರುವ 12 ದಾಖಲೆಗಳಲ್ಲಿ ಒಂದನ್ನು ಘೋಷಣಾ ನಮೂನೆಯೊಂದಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದರು.

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ವ್ಯಾಪಕ ಪ್ರಚಾರದ ಅಗತ್ಯವಿದ್ದು, ಪಟ್ಟಣ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯ್ತಿ, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯ್ತಿ ಪಿಡಿಒ, ಕಾರ್ಯದರ್ಶಿಗಳು ತಮ್ಮ ಸ್ವಚ್ಛತಾ ವಾಹನದಲ್ಲಿ ಎಸ್.ಐ.ಆರ್. ಬಗ್ಗೆ ಪ್ರಚಾರ ಕೈಗೊಳ್ಳಬೇಕು. ಅಲ್ಲದೆ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟ್ಗಳು ಮತಗಟ್ಟೆ ಅಧಿಕಾರಿಗಳೊಂದಿಗೆ ಸಹಕರಿಸಿ ಯಾವೊಬ್ಬ ಅರ್ಹ ಮತದಾರರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕೆಂದರು. 

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ತಾಪಂ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್, ಶಾಸಕ ಎಂ.ಟಿ.ಕೃಷ್ಣಪ್ಪನವರ ಆಪ್ತಸಹಾಯಕ ರಾಘವೇಂದ್ರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಗಿರೀಶ್ ಕೆ ಭಟ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನ್ ತಂಡಕ್ಕೆ ೧೫೮ ರನ್‌ಗಳ ಟಾರ್ಗೆಟ್ಚುಟುಕು ಕ್ರಿಕೆಟ್‌ಗೆ ಶ್ರೇಯಸ್ ಅಯ್ಯರ ನಾಯಕ?ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ ಕೈ ತಪ್ಪಿದಲ್ಲ ಅದು ಮೊದಲೇ ಕ್ಲಿಯರ್ ಆಗಿತ್ತು : ಸತೀಶ್ ಜಾರಕಿಹೊಳಿ ಖಾತೆ ಹಂಚಿಕೆ ಬಗ್ಗೆ ಅಸಮಾಧಾನ : ಸಭೆಯಿಂದ ಹೊರ ನಡೆದ ರಾಮಲಿಂಗಾರೆಡ್ಡಿ ಕಡೇಹಳ್ಳಿ ಗುಡ್ಡದ ಸಮುದಾಯ ಭವನ ಕಾಮಗಾರಿಗೆ 10 ಲಕ್ಷ ರೂ ಅನುದಾನ ಒದಗಿಸಿದ ಶಾಸಕ ಎಂ.ಟಿ.ಕೃಷ್ಣಪ್ಪಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಮತದಾರರು ಸಹಕರಿಸಿ : ಮಂಜುನಾಥ್ಸಕಾರಾತ್ಮಕ ಚಿಂತನೆ ಸಾಧನೆಗೆ ಮೆಟ್ಟಿಲು : ನಾರಂಜಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿಕೆಕಲಾದಗಿಯ 1997 - 98 ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಝರಾಕ್ಸ್ ಮಷೀನ್ ಕಾಣಿಕೆಯೋಜನೆಗಳನ್ನು ಕಟ್ಟಕಡೆಯ ಜನರಿಗೂ ತಲುಪಿಸಿ : ಅಧಿಕಾರಿಗಳಿಗೆ ಡಿ.ಕೆ.ಶಿ ಖಡಕ್ ಸೂಚನೆಕಠಿಣ ಯೋಗಾಸನಗಳನ್ನು ಮಾಡಿದ 9 ತಿಂಗಳ ಗರ್ಭಿಣಿ