Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಟೋಬರ್ 19 ಕ್ಕೆ, 7 ಸ್ಥಾನಗಳಿಗೆ ಮತದಾನ: ಅಂದೇ ಫಲಿತಾಂಶ

Advertisement
-------------ರಾಜ್ಯಾದ್ಯಂತ ಸುದ್ದಿ ಮಾಡಿರುವ  ಬಿಡಿಸಿಸಿ ಬ್ಯಾಂಕ್ ಚುನಾವಣೆ

ಬೆಳಗಾವಿ: ಜಿಲ್ಲಾರಾಜ್ಯ ಕಾರಣದಲ್ಲಿ ಮಾತ್ರವಲ್ಲದೇ ರಾಜ್ಯಾದ್ಯಂತ ಸುದ್ದಿ ಮಾಡಿರುವ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆಯ 17  ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 6  ಸ್ಥಾನಗಳಿಗೆ ಅಕ್ಟೋಬರ್ 19 ರಂದು ಚುನಾವಣೆ ಮತದಾನ ನಡೆಯಲಿದೆ. ಅಂದೇ ಸಂಜೆ ಫಲಿತಾಂಶವೂ ಹೊರ ಬೀಳಲಿದೆ.

ಬೆಳಗಾವಿಯಿಂದ ರಾಹುಲ್ ಜಾರಕಿಹೊಳಿ, ಗೋಕಾಕ ದಿಂದ ಅಮರನಾಥ ಜಾರಕಿಹೊಳಿ, ಚಿಕ್ಕೋಡಿ ಯಿಂದ ಗಣೇಶ ಹುಕ್ಕೇರಿ, ಖಾನಾಪುರ ಕ್ಷೇತ್ರದಿಂದ ಅರವಿಂದ ಪಾಟೀಲ, ಕಾಗವಾಡ ಕ್ಷೇತ್ರದಿಂದ ರಾಜು ಕಾಗೆ, ಸವದತ್ತಿಯಿಂದ ವೀರೂಪಾಕ್ಷಿ ಮಾಮನಿ, ಮೂಡಲಗಿಯಿಂದ ನೀಲಕಂಠ ಕಪ್ಪಲಗುದ್ದಿ,ಇತರೇ ಕ್ಷೇತ್ರದಿಂದ ಚನ್ನರಾಜ ಹಟ್ಟಿಹೊಳಿ, ಯರಗಟ್ಟಿ ಕ್ಷೇತ್ರದಿಂದ ವಿಶ್ವಾಸ ವೈದ್ಯ ಅವಿರೋಧ ಆಯ್ಕೆಯಾಗಿದ್ದಾರೆ.

7 ಸ್ಥಾನಗಳಿಗೆ ಚುನಾವಣೆ:  ಇನ್ನುಳಿದ ಏಳು ಸ್ಥಾನಗಳಾದ ಹುಕ್ಕೇರಿ, ಬೈಲಹೊಂಗಲ, ಕಿತ್ತೂರ, ಅಥಣಿ, ರಾಮದುರ್ಗ, ನಿಪ್ಪಾಣಿ ಹಾಗೂ ರಾಯಬಾಗ್ ನ ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ಕ್ಕೆ ಮತದಾನ ಹಾಗೂ ಅಂದೇ ಫಲಿತಾಂಶ ಹೊರ ಬೀಳಲಿದೆ.

ಬೈಲಹೊಂಗಲದಲ್ಲಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ವಿಶ್ವನಾಥ ಪಾಟೀಲ್ ಕಣದಲ್ಲಿದ್ದಾರೆ. ಕಿತ್ತೂರನಲ್ಲಿ ಶಾಸಕ ಬಾಬಾಸಾಹೇಬ್ ಪಾಟೀಲ್ ಅವರ ಸಹೋದರ ನಾನಾಸಾಹೇಬ್ ಪಾಟೀಲ್ ಹಾಗೂ ವಿಕ್ರಮ ಇನಾಮದಾರ ಸ್ಪರ್ಧೆಗೆ ಇಳಿದಿದ್ದಾರೆ. ಅಥಣಿಯಲ್ಲಿ ಶಾಸಕ ಲಕ್ಷಣ ಸವದಿ ಹಾಗೂ ಮಾಜಿ ಶಾಸಕ ಮಹೇಶ ಕುಮಟಳ್ಳಿ ನಡುವೆ ನಿರ್ಧೇಶಕ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿದೆ. ನಿಪ್ಪಾಣಿಯಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಉತ್ತಮ ಪಾಟೀಲ್ ಕಣದಲ್ಲಿದ್ದಾರೆ. ರಾಯಬಾಗದಲ್ಲಿ ಅಪ್ಪಾಸಾಹೇಬ್ ಕುಲಗೋಡೆ ವಿರುದ್ಧ ಬಸಗೌಡ ಆಸಂಗಿ ಸ್ಪರ್ಧಿಸಿದ್ದಾರೆ. ರಾಮದುರ್ಗ ದಲ್ಲಿ ಶ್ರೀಕಾಂತ ಢವಣ ವಿರುದ್ಧ ಮಲ್ಲಪ್ಪ ಯಾದವಾಡ್ ಸ್ಪರ್ಧೆಗೆ ಇಳಿದಿದ್ದಾರೆ. ಹುಕ್ಕೇರಿಯಲ್ಲಿ ರಮೇಶ ಕತ್ತಿ ಹಾಗೂ ರಾಜೇಂದ್ರ ಪಾಟೀಲ್ ಕಣದಲ್ಲಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ