Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ.19 ರಂದು ಬೆಳಿಗ್ಗೆ 9 ರಿಂದ 4 ರವರೆಗೆ ಮತದಾನ, ಅಂದೇ ಫಲಿತಾಂಶ

Advertisement
--------- ಬಿಡಿಸಿಸಿ ಬ್ಯಾಂಕ್ ಚುನಾವಣೆ: ಅಕ್ಟೋಬರ್ 19 ರ ಮತದಾನಕ್ಕೆ ಸಕಲ ಸಿದ್ದತೆ ಪೂರ್ಣ

---------: ಚುನಾವಣಾಧಿಕಾರಿ ಶ್ರವಣ ನಾಯ್ಕ ಮಾಹಿತಿ

ಬೆಳಗಾವಿ: ಜಿಲ್ಲಾದ್ಯಂತ, ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬಿಡಿಸಿಸಿ ಬ್ಯಾಂಕ್ ಚುನಾವಣೆ ಮತದಾನ ಅಕ್ಟೋಬರ್ 19 ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 4 ಗಂಟೆವರೆಗೆ ಜರುಗಲಿದ್ದು, ಅಂದೇ ಮತ ಏಣಿಕೆ ಜರುಗಿ ಅಂದೇ ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾಧಿಕಾರಿಯಾಗಿರುವ ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯ್ಕ ತಿಳಿಸಿದರು.

ಅವರು ಗುರುವಾರ ಬಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ತಿಳಿಸಿದರು. ಓರ್ವ ಇತರೇ ವಿಭಾಗದ ನಿರ್ಧೇಶಕರು ಸೇರಿದಂತೆ 17 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಈ ಪೈಕಿ 9 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ಜರುಗಿದ್ದು, ಇನ್ನುಳಿದ 7 ಸ್ಥಾನಗಳಿಗೆ 19 ರಂದು ಚುನಾವಣೆ ಜರುಗಬೇಕಿದೆ ಎಂದರು.

ಏಳು ಸ್ಥಾನಗಳಿಗೆ ಜರುಗುವ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 698 ಮತದಾರರು ಮತ ಪಟ್ಟಿ ಪ್ರಕಾರ ಇದ್ದು, ಇದರಲ್ಲಿ 676 ಮತದಾರರು ಮತ ಹಾಕಲು ಅರ್ಹತೆ ಹೊಂದಿದ್ದಾರೆ. ಈ ಮತದಾರರು 19 ರಂದು ತಮ್ಮ ಹಕ್ಕು ಚಲಾಯಿಸಲಿದ್ದು, ಏಳು ಸದಸ್ಯರ ಹಣೆ ಬರಹ ಬರೆಯಲಿದ್ದಾರೆ.

ನ್ಯಾಯಾಲಯದ ಆದೇಶದಂತೆ ಕ್ರಮ: ಮತಕ್ಕಾಗಿ ಮತದಾರರ ಮೇಲೆ ಒತ್ತಡ ಹೇರಿ ಗೊಂದಲ ಸೃಷ್ಠಿಗೆ ಸಂಬಂಧಿಸಿದಂತೆ ಯಾವುದೇ ಸೂಚನೆಗಳು ನ್ಯಾಯಾಲಯದಿಂದ ನಮಗೆ ಬಂದರೆ ತಾವು ನ್ಯಾಯಾಲಯದ ಆದೇಶದಂತೆ ಕ್ರಮ ವಹಿಸುವುದಾಗಿ ಚುನಾವಣಾಧಿಕಾರಿಗಳು ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಸ್ಪಷ್ಟ ಪಡಿಸಿದರು.

ಚೀಟಿ ಎತ್ತುವ ಮೂಲಕ ಸೋಲು, ಗೆಲುವಿನ ನಿರ್ಧಾರ: ಒಂದು ವೇಳೆ  ಇಬ್ಬರು ಅಭ್ಯರ್ಥಿಗಳು ಸಮನಾದ ಮತ ಪಡೆದರೆ, ಚೀಟಿ ಎತ್ತುವ ಮೂಲಕ ಅಭ್ಯರ್ಥಿಗಳ ಗೆಲುವು, ಸೋಲಿನ ನಿರ್ಧಾರ ಮಾಡಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ