Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ ಬಳಿಕ ಮತ್ತೆರಡು ಜಿಲ್ಲೆಗಳ ರೈತರಿಗೆ ವಕ್ಫ್ ನೋಟಿಸ್ 

Advertisement
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ.

ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದ್ದು, ರೈತರಲ್ಲಿ ಆತಂಕ, ಆಕ್ರೋಶಕ್ಕೆ ಕಾರಣವಾಗಿದೆ.

ಯಾದಗಿರಿಯಲ್ಲಿ 1440 ರೈತರ ಜಮೀನು, ಧಾರವಾಡದ ಉಪ್ಪಿನ ಬೆಟಗೇರಿಯಲ್ಲಿ ಕೆಲವು ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 1440 ರೈತರ ಜಮೀನುಗಳ ಪಹಣಿ ಕಾಲಂ 11 ರಲ್ಲಿ ದಿಢೀರನೆ ವಕ್ಫ್ ಮಂಡಳಿ ಬೆಂಗಳೂರು ಎಂದು ನಮೂದಿಸಲಾಗಿದೆ.

ರೈಲ್ವೆ ಯೋಜನೆ, ಹೆದ್ದಾರಿ, ಕೈಗಾರಿಕಾ ಪ್ರದೇಶಕ್ಕೆ ಭೂಮಿ ಸ್ವಾಧೀನ ಮಾಡಿಕೊಂಡ ಈ ಜಾಗದ ಮಾಲೀಕರಿಗೆ ಪರಿಹಾರ ನೀಡುವಾಗ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಾಗಿರುವುದು ಬೆಳಕಿಗೆ ಬಂದಿದೆ.

ಧಾರವಾಡದ ಉಪ್ಪಿನ ಬೆಟಗೇರಿ ಗ್ರಾಮದ ಕೆಲವು ರೈತರ ಜಮೀನು ಪಹಣಿ ಕಾಲಂ 11ರಲ್ಲಿ ವಕ್ಫ್ ಮಂಡಳಿ ಹೆಸರು ಇರುವುದು ಗೊತ್ತಾಗಿದೆ.

2018 -19 ರ ಪಹಣಿಯಲ್ಲಿ ವಕ್ಫ್ ಹೆಸರು ಉಲ್ಲೇಖವಿಲ್ಲ. ಇದು ಪೂರ್ವಜರಿಂದ ಬಂದ ಆಸ್ತಿಯಾಗಿದೆ. ಆದರೆ ಏಕಾಏಕಿ ಇದೀಗ ವಕ್ಫ್ ಆಸ್ತಿ ಎಂದು ನಮೂದಿಸಿ ಜಮೀನು ಕಬಳಿಸುವ ಹುನ್ನಾರ ನಡೆದಿದೆ ಎಂದು ರೈತರು ಆರೋಪಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ