LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭೂ ವಿವಾದ : ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ವಾರೆಂಟ್ ಜಾರಿ

Advertisement
ಮೈಸೂರು: ಭೂ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​​ ಜಾರಿ ಮಾಡಲಾಗಿದೆ.

ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ ಕುಂಬಾರ ಕೊಪ್ಪಲಿನ ನಿವಾಸಿ ಜಯರಾಮು ಅವರ ಜಮೀನು ಸಂಬಂಧ ಕೋರ್ಟ್ ಆದೇಶ ನೀಡಿತ್ತು.

ಈ ಆದೇಶವನ್ನು ಜಿಲ್ಲಾಧಿಕಾರಿಗಳು ಪಾಲನೆ ಮಾಡಿಲ್ಲ ಎಂದು ಜಯರಾಮು ಅವರು ಮತ್ತೆ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಡಿಸಿ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ್ದಾರೆ.

ಮೈಸೂರು ನಗರದ ಕುಂಬಾರ ಕೊಪ್ಪಲಿನ ಸೀತಾರಾಮೇಗೌಡ ಅವರಿಗೆ ಸೇರಿದ್ದ ಹೆಬ್ಬಾಳು ಗ್ರಾಮದ ಸರ್ವೇ ನಂ.155, 159/1 ವ್ಯಾಪ್ತಿಯಲ್ಲಿ ಐದು ಎಕರೆ ಪ್ರದೇಶವನ್ನು 1980 ಸಮಯದಲ್ಲಿ ನಗರ ಭೂ ಮಿತಿ ಕಾಯಿದೆಯಡಿ ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ ಸೀತಾರಾಮೇಗೌಡ ಅವರ ಮಗ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ಮೈಸೂರಿನ ಒಂದನೇ ಅಪರ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್​ನಲ್ಲಿ ಅರ್ಜಿದಾರರ ಪರವಾಗಿ ಆದೇಶ ಬಂದಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಲಯದ ಮೊರೆ ಹೋಗಿತ್ತು. ಹಿರಿಯ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಿ, ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು.

ಬಳಿಕ ಭೂ ಮಾಲೀಕರು ತಮ್ಮ ಪರವಾಗಿ ಕೋರ್ಟ್​ನಲ್ಲಿ ಬಂದ ಆದೇಶವನ್ನು ಜಾರಿಗೊಳಿಸುವ ಮೂಲಕ ಜಮೀನನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.

ಆದರೆ, ಈವರೆಗೆ ಜಿಲ್ಲಾಡಳಿತ ಯಾವುದೇ ಕ್ರಮ ವಹಿಸಿರಲಿಲ್ಲ. ಪರಿಣಾಮ ಭೂ ಮಾಲೀಕರು, ಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು ಎಂದು ಮತ್ತೆ ಕೋರ್ಟ್ ಮೊರೆ ಹೋಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಆದೇಶವನ್ನು ಪಾಲನೆ ಮಾಡದ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿ, ವಿಚಾರಣೆಯನ್ನು ಏ.24 ಮುಂದೂಡಿದ್ದಾರೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ, ಕೋರ್ಟ್ ವಾರಂಟ್ ಪ್ರತಿ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ. ಪ್ರತಿ ಸಿಕ್ಕ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ