ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ನವ ಅಯೋಧ್ಯ ನಗರದಲ್ಲಿ ವಾಷಿಂಗ್ ಮಷಿನ್ ಹಾಗೂ ಫ್ರಿಡ್ಜ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು, ಬಳಿಕ ಇಡೀ ಮನೆಗೆ ಬೆಂಕಿ ಆವರಿಸಿಕೊಂಡಿದೆ. ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೋರ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವರದಿ: ಸುಧೀರ್ ಕುಲಕರ್ಣಿ


