LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ದಲಿತರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿದರೆ ಬಿಜೆಪಿ ತೊರೆಯುತ್ತೇವೆ: ರಮೇಶ್ ಜಿಗಜಿಣಗಿ

Advertisement

ವಿಜಯಪುರ: ದಲಿತರಿಗೆ ನೀಡಲಾಗಿರುವ ಮೀಸಲಾತಿಯನ್ನು ಯಾರೂ ಸಹ ಕಸಿದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಅಕಸ್ಮಾತ್ ಮೀಸಲಾತಿ ರದ್ದುಗೊಳಿಸಿದರೆ ನಾವು ಬಿಜೆಪಿಯೊಂದಿಗೆ ಇರುವುದಿಲ್ಲ. ಪಕ್ಷ ತೊರೆದು ಮನೆಯಲ್ಲಿ ಇರುತ್ತೇವೆ ಹೊರತು ಬಿಜೆಪಿ ಜೊತೆ ಇರುವುದಿಲ್ಲ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಪಕ್ಷದ ಸಭೆಯಲ್ಲೇ ಹೈಕಮಾಂಡ್‌ಗೆ ಅತ್ಯಂತ ಸ್ಪಷ್ಟವಾಗಿ ತಿಳಿಸಿದ್ದೇವೆ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಪಕ್ಷವು ದಲಿತರ ವಿಷಯದಲ್ಲಿ ಮೊದಲಿನಿಂದಲೂ ಅನ್ಯಾಯ ಮಾಡುತ್ತಾ ಬಂದಿದ್ದು, ಈಗ ಕೇವಲ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮುಂದಿನ ದಿನಗಳಲ್ಲಿ ದಲಿತ ಸಮುದಾಯಗಳು (ಎಡ-ಬಲ) ಕಾಂಗ್ರೆಸ್ ಬೆಂಬಲಿಸುವುದಿಲ್ಲ, ಬದಲಾಗಿ ಬಿಜೆಪಿ ಜೊತೆಯೇ ಇರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

2022ರಲ್ಲಿ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿಯನ್ನು ಶೇ. 15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿಯನ್ನು ಶೇ. 3 ರಿಂದ ಶೇ. 7ಕ್ಕೆ ಹೆಚ್ಚಿಸುವ ಮೂಲಕ ತನ್ನ ಬದ್ಧತೆ ಪ್ರದರ್ಶಿಸಿತ್ತು ಎಂದು ಅವರು ನೆನಪಿಸಿಕೊಂಡರು.

ಆದರೆ, ಪ್ರಸ್ತುತ ಇರುವ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹಾಗೂ ಅವೈಜ್ಞಾನಿಕ ಧೋರಣೆಯಿಂದಾಗಿ ಹೈಕೋರ್ಟ್‌ನಲ್ಲಿ ಈ ಕಾಯ್ದೆಯನ್ನು ಸೂಕ್ತವಾಗಿ ಸಮರ್ಥಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎದುರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾದ ಕಾರಣ, ಹೈಕೋರ್ಟ್ ಮೀಸಲಾತಿ ಹೆಚ್ಚಳದ ಆದೇಶವನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸಿದೆ ಎಂದು ಸಂಸದ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಿಗೆ ಬಿದ್ದು ಪ್ರಾರ್ಥಿಸ್ತೇನೆ ಹೋರಾಟ ಕೈಬಿಡಿ : ಕಬ್ಬು ಬೆಳೆಗಾರರ ಹೋರಾಟಗಾರರಿಗೆ ಸಿಎಂ ಮನವಿ 5-10 ಓವರ್ ಗಳ ಪಂದ್ಯವೂ ಗ್ಯಾರಂಟಿ ಇಲ್ಲದಂತಾಗಿದೆ ಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ವಾ?: ಕುಮಾರಸ್ವಾಮಿ ಪ್ರಶ್ನೆ ಪ್ರಿಯಾಂಕ್ ಖರ್ಗೆ ಕೇವಲ 'ಸೋಷಿಯಲ್ ಮೀಡಿಯಾ ಮಂತ್ರಿ': ಶ್ರೀರಾಮುಲುನಿರಂತರ ಮಳೆಯಿಂದ ಭಾರತ- ವೆಸ್ಟ್ ಇಂಡೀಸ್ ಪಂದ್ಯದ ಟಾಸ್ ವಿಳಂಭಶವಾಗಾರದಲ್ಲಿ ಆಲ್ಕೋಹಾಲ್ ಪಾರ್ಟಿ ಮಾಡಿದ ವೈದ್ಯ : ಅಮಾನತು ಶಿಕ್ಷೆ ಸಿಜೆಪಿ ಪ್ರತಿಭಟನೆಗೂ.. ಕಾಂಗ್ರೆಸ್​​​ಗೂ ಸಂಬಂಧವಿಲ್ಲ : ಸತೀಶ್ ಜಾರಕಿಹೊಳಿದಿಢೀರ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯರೆಡ್ಡಿ ರಾಜೀನಾಮೆ ಇಂಚಲ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆಕಬ್ಬು ಬೆಳೆಗಾರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ : ಹೈಕೋರ್ಟ್ ಮಧ್ಯಪ್ರವೇಶ