LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ವೆಂಕಟೇಶ್ವರ ಪ್ರೌಢ ಶಾಲೆಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Advertisement

ಮಾನ್ವಿ : ಪಟ್ಟಣದಶ್ರೀವೆಂಕಟೇಶ್ವರ ಪ್ರೌಢಶಾಲೆಯಲ್ಲಿ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ ಓಲೇಕಾರ್ ಅವರು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಉತ್ತಮವಾದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ನನ್ನ ತಂದೆಯವರಾದ ದಿವಂಗತ ಫಕೀರಪ್ಪ ಓಲೇಕಾರ್ ಅವರು ಸ್ಥಾಪಿಸಿದ ಈ ಸಂಸ್ಥೆಯು ಇಂದು ಮಾನ್ವಿ ಭಾಗದಲ್ಲಿ ಬೃಹತ್ ಶಿಕ್ಷಣ ಸಂಸ್ಥೆಯಾಗಿ ಬೆಳೆದು ನಿಂತಿದೆ. ಇದು ಅವರ ಕನಸಿನ ಫಲ ಎಂದು ಹೇಳಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನುಮುಖ್ಯಗುರು ಚಂದ್ರಶೇಖರ ಅವರು ಮಾತನಾಡಿ ನಮ್ಮ ಸಂಸ್ಥೆಯ ಅಧ್ಯಕ್ಷರಾದ ದಿ.ಫಕೀರಪ್ಪ ಓಲೇಕಾರ್ ಅವರು 2004ರಲ್ಲಿ ಕೇವಲ 8 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾದ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆ ಇಂದು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ದೇಶಿಸಿ ಆಂಜನೇಯ ನಸಲಾಪುರ ಅವರು ಮಾತನಾಡಿ ಶಿಕ್ಷಣ ಎಂಬುದು ಕೇವಲ ಅಂಕಗಳನ್ನು ಗಳಿಸುವುದಲ್ಲ. ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು. ಜೊತೆಗೆ ಶಿಕ್ಷಕರನ್ನು ಮತ್ತು ತಂದೆ-ತಾಯಿಯನ್ನು ಗೌರವಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮತ್ತೋರ್ವ ಮುಖ್ಯ ಅತಿಥಿಯಾದ ಎಸ್.ಎಂ.ವಿ.ಓ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀದೇವಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ಡಾ. ವೆಂಕಟೇಶ್ ಓಲೇಕಾರ್, ಆಡಳಿತಾಧಿಕಾರಿಗಳಾದ ಶಂಕರಪ್ಪ ನಕ್ಕುಂದ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 
ಕಾರ್ಯಕ್ರಮದಲ್ಲಿ ನೂತನವಾಗಿ ಶಾಲೆಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಸಂಜನಾ ವಿದ್ಯಾರ್ಥಿ ಕಾರ್ಯಕ್ರಮವನ್ನು ನಿರೂಪಿಸಿದರು ಅಶ್ವಿನಿ ವಿದ್ಯಾರ್ಥಿ ಸ್ವಾಗತಿಸಿದರು ಚಂದ್ರಶೇಖರ ವಿದ್ಯಾರ್ಥಿ ವಂದಿಸಿದರು ಮಾಡಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST