ಕೊಲ್ಕತ್ತಾ:ರಾಷ್ಟ್ರೀಯತೆ ಮತ್ತು ಸಾಂಸ್ಕೃತಿಕ ಐಕ್ಯತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಮಹತ್ವದ ಹಾಗೂ ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅನುದಾನಿತ ಮತ್ತು ಮಾನ್ಯತೆ ಪಡೆದ ಮದ್ರಸಾಗಳಲ್ಲಿ ಇನ್ಮುಂದೆ ದೈನಂದಿನ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರೀಯ ಗೀತೆಯೊಂದಿಗೆ 'ವಂದೇ ಮಾತರಂ' ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮದ್ರಸಾಗಳಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯ ಭಾವನೆಗಳನ್ನು ಮೂಡಿಸುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಹೊಸ ನಿಯಮವು ರಾಜ್ಯ ಮದ್ರಸಾ ಶಿಕ್ಷಣ ಮಂಡಳಿಯ ಅಡಿಯಲ್ಲಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ತಕ್ಷಣದಿಂದಲೇ ಅನ್ವಯವಾಗಲಿದ್ದು, ಪ್ರಾರ್ಥನಾ ವೇಳೆಯಲ್ಲಿ 'ವಂದೇ ಮಾತರಂ' ಕಡ್ಡಾಯವಾಗಿ ಧ್ವನಿಸಬೇಕಿದೆ.

