ಕೊಲ್ಕತ್ತಾ: ಪಶ್ಚಿಮ ಬಂಗಾಳ ಸಂಭಾವ್ಯ ಸಿಎಂ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಗುಂಡಿಟ್ಟು ಹತ್ಯೆ ಮಾಡಲಾಗಿದೆ.
ಪಶ್ಚಿಮ ಬಂಗಾಳದ ಮಧ್ಯಮಗ್ರಾಮದಲ್ಲಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕನ ಗುಂಡಿನ ದಾಳಿ ನಡೆದಿದೆ.
ಬಿಜೆಪಿ ನಾಯಕ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂದ್ರನಾಥ್ ಮೇಲೆ ಹತ್ತಿರದಿಂದಲೇ ಗುಂಡು ಹಾರಿಸಲಾಗಿದೆ. ದಾಳಿ ನಡೆಸಿದ ತಕ್ಷಣ ಸ್ಥಳದಿಂದ ಮೂವರು ಅಪರಿಚಿತ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಭಾರತೀಯ ಜನತಾ ಪಕ್ಷ (ಬಿಜೆಪಿ) ಯಿಂದ ಚುನಾವಣಾ ಸೋಲನ್ನು ಅನುಭವಿಸಿದ 48 ಗಂಟೆಗಳ ಒಳಗೆ ಈ ಘಟನೆ ಸಂಭವಿಸಿದೆ.

