ಬೆಂಗಳೂರು: ಗೃಹಲಕ್ಷ್ಮೀ ಯೋಜೆನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯಿಂದ ಹೊರಗಿಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಅಂದು ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್ ನಿಂಗೂ ಫ್ರೀ, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ಘೋಷಿಸಿದ್ದರು.
ಈಗ ಏನಾಯ್ತು? 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು ಎಂದು ಕಿಡಿಕಾರಿದರು.


