Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಸುವಿನ ಕೆಚ್ಚಲು ಕೊಯ್ದ ದುಷ್ಟರು

Advertisement
ಬಾಗಲಕೋಟೆ : ಮನೆಯ ಮುಂದೆ ಮಲಗಿದ್ದ ಹಸುವಿನ ಕೆಚ್ಚಲಿನ ಒಂದು ಮೊಲೆಯನ್ನು ಕೊಯ್ದ ಘಟನೆ ಜಿಲ್ಲೆಯ ಕುಳಗೇರಿ ಕ್ರಾಸ್​ನಲ್ಲಿ ನಡೆದಿದೆ.

ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದ್ದು ಬೆಳಗಿನ ಜಾವ ಹಸುವಿನ ಮಾಲೀಕ ಕೊಟ್ಟಿಗೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಗರ್ಭಾವಸ್ಥೆಯಲ್ಲಿರುವ ಹಸುವಿನ ಕೆಚ್ಚಲಿನ ಒಂದು ಮೊಲೆ ಕೊಯ್ದು ಪಾಪಿಗಳು ವಿಕೃತಿ ಮೆರೆದಿದ್ದಾರೆ. ಸದ್ಯ ಹಸು ರಕ್ತ ಸ್ರಾವದಿಂದ ನರಳಾಡಿದ್ದು ಸ್ಥಳೀಯ ಪಶು ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಲಾಗಿದೆ.

ಹಸು ಒಬ್ಬಿಬ್ಬರಿಗೆ ಮಣಿಯುವುದಿಲ್ಲ. ನಾಲ್ಕೈದು ಜನ ಮೂಗುದಾರ ಹಿಡಿದು ಈ ಕೃತ್ಯ ನಡೆಸಿರಬಹುದು ಎಂದು ಹಸುವಿನ ಮಾಲೀಕ ಬರಮಪ್ಪ ಹೇಳಿದ್ದಾರೆ.

ಸದ್ಯ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು ಘಟನಾ ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡು ಹೋಗಿದ್ದಾರಂತೆ.

ಪಾಪಿಗಳ ಈ ಕೃತ್ಯಕ್ಕೆ ಜನರು ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾವು ಪೂಜಿಸುವ ಗೋಮಾತೆ ದೇವರ ಸಮಾನ. ಆದರೆ ಹಾಲು ಕೊಡುವ ಗೋವಿನ ಕೆಚ್ಚಲು ಕೊಯ್ದು ಪಾಪದ ಕೆಲಸ ಮಾಡಿದ್ದಾರೆ. ಈ ದುಷ್ಕೃತ್ಯ ಎಸಗಿದ ಪಾಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದಿದ್ದಾರೆ.

ಕೆಲ ತಿಂಗಳ ಹಿಂದೆಯಷ್ಟೇ ಸಚಿವ ಜಮೀರ್ ಅಹಮದ್​ ಅವರ ಕ್ಷೇತ್ರದಲ್ಲಿ ಇಂತಹದ್ದೆ ಘಟನೆ ನಡೆದಾಗ, ಭಾರೀ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು. ಅಲ್ಲದೇ ಬಿಜೆಪಿಯು ಬೃಹತ್ ಪ್ರತಿಭಟನೆಯನ್ನು ಮಾಡಿತ್ತು. ಇದೀಗ ಇಂತಹ ಅಮಾನವೀಯ ಘಟನೆ ಮರುಕಳಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ