Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ 5 ದಿನ ರಾಜ್ಯದಲ್ಲಿ ವ್ಯಾಪಕ ಮಳೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ 

Advertisement

ಬೆಂಗಳೂರು : ರಾಜ್ಯದಲ್ಲಿ (Karnataka ) ನೈರುತ್ಯ ಮುಂಗಾರು (Monsoon ) ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ 5 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ (Rain ) ಮುನ್ಸೂಚನೆ ನೀಡಿದೆ.

ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 'ಎಲ್ಲೋ ಅಲರ್ಟ್' ಘೋಷಿಸಲಾಗಿದೆ.

ಪ್ರಸ್ತುತ ಹವಾಮಾನವು ಸಾಮಾನ್ಯವಾಗಿ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ತೀವ್ರಗೊಳ್ಳಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದ್ದು, 'ಎಲ್ಲೋ ಅಲರ್ಟ್' ನೀಡಲಾಗಿದೆ.

ಹಗಲಿನ ವೇಳೆಯಲ್ಲಿ ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 13 ಮೈಲಿ ವೇಗದಲ್ಲಿ ತಂಗಾಳಿ ಬೀಸುತ್ತಿದ್ದು, ಗಾಳಿಯಲ್ಲಿನ ಆರ್ದ್ರತೆ (Humidity) ಶೇಕಡಾ 67 ರಷ್ಟಿರಲಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಜೂನ್ 28 ಮತ್ತು 29 ರಂದು ಶೇಕಡಾ 65 ರಷ್ಟು ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST