Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಚಟ್ಟ ಕಟ್ಟಿದ ಹೆಂಡತಿ - ಪ್ರಿಯಕರ

Advertisement
ಚಿಕ್ಕೋಡಿ: ಪತ್ನಿಯು ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಹತ್ಯೆಮಾಡಿದ ಘಟನೆ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದ್ದು, ಇದು ಗ್ರಾಮಸ್ಥರನ್ನೇ ಬೆಚ್ಚಿಬೀಳಿಸಿದೆ.

ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್ ಮಚ್ಚೇಂದ್ರ ಓಲೇಕಾರ (45) ಕೊಲೆಯಾದ ಗಂಡ. ಆತನ ಹೆಂಡತಿ ಸಿದ್ದವ್ವ ಓಲೇಕಾರ್, ಗಣಪತಿ ಕಾಂಬಳೆಯವರ ಜೊತೆಗೆ ಅನೈತಿಕ ಸಂಬಂಧದಲ್ಲಿದ್ದರು. ಇದಕ್ಕೆ ಗಂಡ ಅಡ್ಡಿ ಮಾಡುತ್ತಿದ್ದರಿಂದ ಇಬ್ಬರೂ ಸೇರಿ ಆತನನ್ನು ಹತ್ಯೆ ಮಾಡಿ, ಕೃಷ್ಣಾ ನದಿಗೆ ಎಸೆದಿದ್ದಾರೆ.


ಸುಗಂಧಾದೇವಿ ದರ್ಶನಕ್ಕೆಂದು ಜನವರಿ 5 ರಂದು ಗಂಡನನ್ನು ಹೆಂಡತಿ ಕರೆದುಕೊಂಡು ಹೋಗಿದ್ದಳು. ಆತ ಕೃಷ್ಣಾ ನದಿ ದಂಡೆ ಮೇಲೆ ಸ್ನಾನ ಮಾಡುತ್ತಿದ್ದಾಗ, ಪತ್ನಿ ಮತ್ತು ಗಣಪತಿ ಇಬ್ಬರೂ ಕಲ್ಲಿನಿಂದ ಹೊಡೆದು ಮಚ್ಚೇಂದ್ರನ ಹತ್ಯೆ ಮಾಡಿದ್ದಾರೆ. ಆತನನ್ನು ಕೊಂದ ಬಳಿಕ ಶವವನ್ನು ಅಲ್ಲೇ ಕೃಷ್ಣಾ ನದಿಗೆ ಎಸೆದು ಪರಾರಿಯಾಗಿದ್ದರು.


ಮರುದಿನ, ನದಿಯಲ್ಲಿ ಶವ ಕಂಡ ಸುದ್ದಿ ಪಡೆದ ರಾಯಬಾಗ ಪೋಲೀಸರು, ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ, ಸತ್ಯ ಹೊರಬಿದ್ದಿದೆ.


ಪ್ರಿಯಕರನ ಜೊತೆಗೆ ಸೇರಿ ಹೆಂಡತಿಯೇ ಕೊಲೆ ಮಾಡಿರುವ ಬಗ್ಗೆ ಹಾಗೂ ಅವರ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕಾಗಿ ಗಂಡನ ಹತ್ಯೆ ಮಾಡಿರುವ ಬಗ್ಗೆ ಇಬ್ಬರೂ ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ