ಧಾರವಾಡ : ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತಿ-ಪತ್ನಿ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ್ ಗ್ರಾಮದಲ್ಲಿ ನಡೆದಿದೆ.ಮೃತ ಪತ್ನಿಯನ್ನು ಸಲ್ಮಾ (22) ಎಂದು ಗುರುತಿಸಲಾಗಿದೆ.ಪತಿ ಮೌಲಾಸಾಬ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿನ್ನೆ ಪತಿ ಹಾಗೂ ಪತ್ನಿ ನಡುವೆ ಅನೈತಿಕ ಸಂಬಂಧದ ಶಂಕೆ ವಿಚಾರವಾಗಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿದ ವೇಳೆ ಮೌಲಾಸಾಬ್ ಚಾಕುವಿನಿಂದ ಸಲ್ಮಾಗೆ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಆತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


