Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಸಿದ್ದರಾಮಯ್ಯ ಘೋಷಣೆ 

Advertisement



ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಆಯೋಜಿಸಿದ್ದ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ದಿವಂಗತ ಕೆ.ಆರ್.ಪೇಟೆ ಕೃಷ್ಣ ಅವರ ಜನ್ಮದಿನ, ಸಾಧಕರಿಗೆ ಕೃಷ್ಣ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಕೃಷ್ಣರವರ ಬದುಕು ಹಾಗೂ ಸಾಧನೆಗಳನ್ನು ಸ್ಮರಿಸಿದ್ದಾರೆ.

ಮಾಜಿ ಸಚಿವರಾದ ನಾರಾಯಣಗೌಡ, ಚೆಲುವರಾಯಸ್ವಾಮಿ, ಇಂದಿರಮ್ಮ ಕೃಷ್ಣ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಇದ್ದುಕೊಂಡು ಜನರ ಕಷ್ಟ ಸುಖಗಳಿಗೆ ದನಿಯಾಗಿರುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಾಜಕೀಯವಾಗಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು.

ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡು ಕೊಡಬೇಕಾದ ಕಾಲ ಬಂದಿದೆ. 

ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಚ್ಚುವರಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್‌ ವಿತರಣೆ : ಆಹಾರ ಇಲಾಖೆ ನಿರ್ಧಾರ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಸಿದ್ದರಾಮಯ್ಯ ಘೋಷಣೆ ಸಚಿವ ಸಂಪುಟ ವಿಸ್ತರಣೆ : ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಇಂದು ದೆಹಲಿಗೆ ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ ಬೆಳಗಾವಿ ಸಿಸಿಬಿ ಪೊಲೀಸರ ಭರ್ಜರಿ ಬೇಟೆ: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಗಾಂಜಾ ಸಮೇತ ಅರೆಸ್ಟ್!ಭಾರತ- ಜಿಂಬಾಬ್ವೆ ತೃತೀಯ ಟ್ವೆಂಟಿ-೨೦ ನಾಳೆತನ್ನ ದಾಖಲೆ ತಾನೇ ಸರಿಗಟ್ಟಿದ ಟೀಂ ಇಂಡಿಯಾಭಾರತಕ್ಕೆ ೯೦ ರನ್‌ಗಳ ಸುಲಭ ಗೆಲುವುಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಪೆನ್ ಡ್ರೈವ್ ಹಂಚಿದ್ದ 8 ಜನ ವಿರುದ್ಧ ಸಮನ್ಸ್ ಜಾರಿ ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್ ಮತ್ತು ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ