Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಡುಗು, ಸಿಡಿಲುಗಳಿಂದ, ಭೂಮಿ ತಲ್ಲಣಗೊಳ್ಳಲಿದೆ : ಕೋಡಿ ಶ್ರೀ

Advertisement

ಶಿವಮೊಗ್ಗ : ಪ್ರಕೃತಿಯಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯ ಹಾಗೂ ಏರುಪೇರುಗಳಿಂದಾಗಿ ಮುಂದಿನ ದಿನಗಳಲ್ಲಿ ಜಲ ಕಂಟಕ ಎದುರಾಗಲಿದ್ದು, ಭೂಮಿ ತಲ್ಲಣಗೊಳ್ಳಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಸೋಮವಾರ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿಯಲ್ಲಿನ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಎಚ್ಚರಿಸಿದರು.ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಜಲ ಕಂಟಕ ಎದುರಾಗುವ ಸಾಧ್ಯತೆ ಇದೆ.

ಗುಡುಗು, ಸಿಡಿಲು, ಗಾಳಿ ಮತ್ತು ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇದರಿಂದ ಭೂಮಿ ತಲ್ಲಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಆಕಸ್ಮಿಕ ಘಟನೆಗಳು ಸಂಭವಿಸುವ ಮೂಲಕ ದೊಡ್ಡ ನಗರಗಳು ಸಂಕಷ್ಟಕ್ಕೆ ಸಿಲುಕಲಿವೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಯಾಗಲಿದೆ ಎಂದು ಶ್ರೀಗಳು ಆಶಾದಾಯಕ ನುಡಿಗಳನ್ನಾಡಿದ್ದಾರೆ.

ರಾಜಕಾರಣದ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ ಅವರು, "ಅರಸನ ಅರಮನೆ ಕಳೆಗುಂದಿತು, ಪಟ್ಟದ ಆನೆ ಗಾಂಭೀರ್ಯ ಕಳೆದುಕೊಂಡಿತು" ಎಂದು ಮಾರ್ಮಿಕವಾಗಿ ತಿಳಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST