LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಗರಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು 

Advertisement

ಬೆಳಗಾವಿ : ಜಿಲ್ಲೆಯ (Belagavi) ರಾಯಬಾಗ ತಾಲೂಕಿನಲ್ಲಿ ನಾಗರಪಂಚಮಿ ಹಬ್ಬದ ಆಚರಣೆಯ ನಡುವೆಯೇ ಕರುಣಾಜನಕ ಘಟನೆಯೊಂದು ಸಂಭವಿಸಿದೆ. 

ಕೃಷಿ ಭೂಮಿಯಲ್ಲಿ ಕಳೆ (Weed) ತೆಗೆಯುವಲ್ಲಿ ತೊಡಗಿದ್ದ 43 ವರ್ಷದ ಸತ್ಯವ್ವ ಶಿಂಗೆ ಎಂಬ ಮಹಿಳೆ ಮೇಲೆ ಪೊದೆಯಲ್ಲಿ ಅಡಗಿದ್ದ ಕೊಳಕುಮಂಡಲ ಎಂಬ ತೀವ್ರ ವಿಷಕಾರಿ ಸರ್ಪ ದಿಢೀರನೆ ದಾಳಿ (Snake bite) ಮಾಡಿದೆ.

ಹೀಗೆ ಹಾವಿನ ದಾಳಿಯ ನಂತರ ಸರ್ಪದ ತೀವ್ರ ವಿಷ ದೇಹವನ್ನು ಆವರಿಸಿದ ಪರಿಣಾಮ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದಾರೆ. 

ಈ ಘಟನೆ ನಡೆದ ತಕ್ಷಣವೇ ಅವರನ್ನು ಚಿಕಿತ್ಸೆಗೆಂದು ಸಮೀಪದ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತಾದರೂ, ವೈದ್ಯಕೀಯ ನೆರವು ಸಿಗುವ ಮೊದಲೇ ಅವರು ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ನಾಗರಪಂಚಮಿ ಹಬ್ಬದ ಹರ್ಷದಲ್ಲಿದ್ದ ಇಡೀ ಗ್ರಾಮ ಈ ಆಕಸ್ಮಿಕ ಅವಘಡದಿಂದಾಗಿ ತೀವ್ರ ಆಘಾತಕ್ಕೆ ಒಳಗಾಗಿದ್ದು, ಶೋಕ ಸಾಗರದಲ್ಲಿ ಮುಳುಗಿದೆ. ಈ ದುರಂತ ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್