Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ : ಡಿ.ಕೆ ಶಿವಕುಮಾರ್

Advertisement
ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಸಾಲು ಸಾಲು ಆರೋಪ ಮಾಡುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮೀಸಲಾತಿ ವಿರೋಧಿಗಳು ಬಿಜೆಪಿಯವರು. ಸೋಲ್ತೀವಿ ಅಂತ ಗೊತ್ತಿದ್ದೂ ಬಿಲ್ ತಂದಿದ್ರು. ಪ್ರಜಾಪ್ರಭುತ್ವದಲ್ಲಿ ನಾವೆಲ್ಲ ಪ್ರತಿನಿಧಿಗಳಲ್ವಾ? ಇನ್ನೂ 240 ಜನ ನಾವು ಗೆದ್ದಿಲ್ವಾ? ಅವರ ಜೊತೆಗೆ ಮಸೂದೆ ಬಗ್ಗೆ ಮಾತಾಡಬೇಕಿತ್ತು.

ಯಾಕೆ ಮಾತಾಡಿಲ್ಲ? ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಅವರೊಬ್ಬರೇ ನಿರ್ಧಾರಗಳನ್ನು ತೆಗೆದುಕೊಂಡು ಜಾರಿ ಮಡುವುದಲ್ಲ. ಏನು ಮಾಡ್ತಿದ್ದೇವೆ ಎಂದು ಹೇಳಬೇಕಿತ್ತು.

ಇದೆಲ್ಲದರ ಬಗ್ಗೆ ಚರ್ಚೆ ಮಾಡಬೇಕಿತ್ತು. ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ. ಮಹಿಳಾ ಮೀಸಲಾತಿ ಹೆಸರಲ್ಲಿ ಕ್ಷೇತ್ರ ಪುಅನರ್ವಿಂಗಡಣೆ ಮಸೂದೆಯನ್ನು ಸೇರಿಸಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.

ಕ್ಷೇತ್ರ ಪುಅನರ್ವಿಂಗಡೆ ಮೂಲಕ ದಕ್ಷಿಣ ಭಾರತದ ಕ್ಷೇತ್ರ ಕಡಿಮೆ ಮಾಡುವ ಯತ್ನ ನಡೆಸಿದ್ದಾರೆ. ನಮ್ಮನ್ನ ಕರೆದು ಚರ್ಚಿಸದೇ ಉತ್ತರ ಭಾರತದಲ್ಲಿ ಕ್ಷೇತ್ರಗಳನ್ನ ಜಾಸ್ತಿ ಮಾಡಿಕೊಳ್ಳಲು ಹೊರಟಿದ್ದರು. ದಕ್ಷಿಣ ಭಾರತ ಕ್ಷೇತ್ರ ಕಡಿಮೆ ಮಾಡಲು ಹೊರಟಿದ್ದರು. ಇದನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ದಕ್ಷಿಣ ಭಾರತದ ಎಂಪಿಗಳು ಪ್ರತಿಭಟನೆ ಮಾಡಿದ್ದಾರೆ. ಮಸೂದೆಗೆ ಸೋಲಾಗಿರುವುದು ಪ್ರತಿಭಟನೆಗೆ ಸಿಕ್ಕ ದೊಡ್ಡ ಜಯ. ನಾವು ಅವಮಾನ ಮಾಡಿಲ್ಲ. ಮಹಿಳಾ ಪರ ನಿಂತಿರೋದು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ