LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

'ಸರಕಾರ ಕೊಡುವ ಸಂಬಳಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಿ'

Advertisement
ಲಂಚ ಪಡೆದರೆ ಸೂಕ್ತ ಕ್ರಮ ಶಾಸಕ: ಶಾಸಕ ಅಶೋಕ ಪಟ್ಟಣ

ರಾಮದುರ್ಗ: ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರ ಕಾರ್ಯಾಲಯದಲ್ಲಿ ಶನಿವಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಏರ್ಪಡಿಸಿದ ಲ್ಯಾಪಟಾಪ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಅಶೋಕ ಪಟ್ಟಣ ಮಾತನಾಡಿದರು.



ಕೈಬರಹದ ಮುಖಾಂತರ ಗ್ರಾಮ ಆಡಳಿತಾಧಿಕಾರಿಗಳು ಸರಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ವಿಳಂಬವಾಗುವುದನ್ನು ಅರಿತು, ತ್ವರಿತಗತಿಯಲ್ಲಿ ಜನತೆಗೆ ಸೇವೆ ಒದಗಿಸುವಂತಾಗಲು ಕಂದಾಯ ಇಲಾಖೆಯಿಂದ ಲ್ಯಾಪ್‌ಟಾಪ್ ವಿತರಣೆಗೆ ಮಾಡಲಾಗುತ್ತಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಹೇಳಿದರು.

ಆಸ್ತಿಯ ಹಳೇ ದಾಖಲೆಗಳು ಆಸ್ತಿದಾರರ ಜೀವನ ಇದ್ದಂತೆ, ರೈತರ, ಜನತೆಯ ಹಳೇ ದಾಖಲೆಗಳನ್ನು ಗಣಕೀಕರಣ ಮಾಡುವ ಸಂದರ್ಭದಲ್ಲಿ ಜಾಗೃತೆ ವಹಿಸಿ, ಲೋಪಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಕವಿಮಾತು ಹೇಳಿದ ಅವರು, ಕೆಲವು ಸಂದರ್ಭದಲ್ಲಿ ಜನತೆ ಅಷ್ಟೇ ಅಲ್ಲದೆ ಸರಕಾರದ ಉದ್ದೇಶಕ್ಕಾಗಿ ಜನಪ್ರತಿನಿಧಿಗಳು ಕೇಳಿದರೂ ದಾಖಲೆಗಳು ಲಭ್ಯವಿಲ್ಲ ಎಂಬ ಉತ್ತರ ಬರುತ್ತದೆ, ಇನ್ನು ಮುಂದಾದರೂ ಅಂತಹ ಪ್ರಸಂಗಗಳು ಎದುರಾಗದಂತೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸರಕಾರದ ವಿವಿಧ ಸುಮಾರು 54 ಯೋಜನೆಗಳನ್ನು ಜನತೆಗೆ ತಲುಪಿಸಲು, ವಿವಿಧ ಪಿಂಚಣಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಜನತೆಗೆ ತಲುಪಿಸಲು ಗ್ರಾಮ ಆಡಳಿತಾಧಿಕಾರಿಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿ ಕೆಲಸ ಮಾಡಬೇಕು ಎಂದರು.

ಗ್ರಾಮೀಣ ಪ್ರದೇಶದ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಗ್ರಾಮ ಆಡಳಿತಾಧಿಕಾರಿಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿ ಅಧಿಕ ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಜನತೆಯಿಂದ ಕೇಳಿ ಬರುತ್ತಿದೆ. ಸರಕಾರ ಕೊಡುವ ಸಂಬಳಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಒಂದು ವೇಳೆ ಲಂಚ ತೆಗೆದುಕೊಳ್ಳುವುದು ಸಾಬೀತಾದರೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಅಶೋಕ್ ಪಟ್ಟಣ ಹೇಳಿದರು.

ವರದಿ: ಮಂಜುನಾಥ ಕಲಾದಗಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ