LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಯಡಿಯೂರಪ್ಪ, ಬಿ. ವೈ ವಿಜಯೇಂದ್ರ ಮನೆಗೆ ಭಿತ್ತಿಪತ್ರ ಅಂಟಿಸಿದ ಕೈ ಕಾರ್ಯಕರ್ತರು 

Advertisement

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಆಡಳಿತಾರೂಢ ಕಾಂಗ್ರೆಸ್‌(Congress) ಹಾಗೂ ವಿರೋಧ ಪಕ್ಷ ಬಿಜೆಪಿಯ ನಡುವೆ ಮತ್ತೆ 'ಪೋಸ್ಟರ್‌ ವಾರ್' ಶುರುವಾಗಿದೆ. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(vijayendra) ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ನೀಡಿದ್ದಾರೆನ್ನಲಾದ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ನಗರದಾದ್ಯಂತ ಅವರ ವಿರುದ್ಧ ಕಟು ಬರಹಗಳಿರುವ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮನೆ ಬಳಿಯೇ ಕಾಂಗ್ರೆಸ್ ಕಾರ್ಯಕರ್ತರು ಈ ಭಿತ್ತಿಪತ್ರಗಳನ್ನು ಅಂಟಿಸಿರುವುದು ರಾಜಕೀಯ ವಲಯದಲ್ಲಿ ಕಾವು ಹೆಚ್ಚಿಸಿದೆ. ವಿಜಯೇಂದ್ರ ಅವರು ತಮ್ಮ ಹೇಳಿಕೆಗಳಿಗೆ ತಕ್ಷಣವೇ ಬಹಿರಂಗ ಕ್ಷಮೆಯಾಚಿಸಬೇಕೆಂದು ಪೋಸ್ಟರ್‌ಗಳ ಮೂಲಕ ಆಗ್ರಹಿಸಲಾಗಿದೆ.

ರಾಜಾಜಿನಗರ, ಮಂಜುನಾಥನಗರ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿಜಯೇಂದ್ರ ಅವರನ್ನು ಟಾರ್ಗೆಟ್ ಮಾಡುವಂತಹ ಬರಹಗಳಿರುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ಇದರಿಂದಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರ ನಡುವೆ ಸಮಾಜಿಕ ಜಾಲತಾಣ ಹಾಗೂ ರಸ್ತೆಗಿಳಿದು ನಡೆಸುವ ರಾಜಕೀಯ ಸಮರ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ