LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದಿನಿಂದ ಭಾರೀ ಮಳೆ : 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ 

Advertisement
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಭಾರೀ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ ಹೊರತಾಗಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಕರಾವಳಿ ಜಿಲ್ಲೆಗಳ ಹಲವು ಕಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆ ಆಗುವ ಸಂಭವ ಇದೆ.

ಬುಧವಾರದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆಯ ಹಲವು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು, ಗುರುವಾರದಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎನ್ನಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ