ಅಥಣಿ: ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ನಗರದ ಕೆಎಲ್‌ಇ ಸಂಸ್ಥೆಯ ಎಸ್‌ಎಂಎಸ್ ಕಾಲೇಜು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 12 ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯೋಗದಿಂದ ಯೋಗಿಯಾಗಲು ಸಾಧ್ಯವಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ನಮ್ಮೆಲ್ಲರ ಜವಾಬ್ದಾರಿ. ಯೋಗ ಪ್ರತಿನಿತ್ಯ ನಮ್ಮ ಜೀವನದಲ್ಲಿ ರೂಢಿಸಿಕೊಂಡು ಸದೃಢ ಮತ್ತು ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಅರಣ್ಯ ಇಲಾಖೆ ಉದ್ಯಾನದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಯೋಗ ಕಟ್ಟೆ ನಿರ್ಮಿಸಲಾಗಿದೆ. 30 ಲಕ್ಷ ರೂ ವೆಚ್ಚದಲ್ಲಿ ಯೋಗಭವನ ನಿರ್ಮಾಣ ಮಾಡುವ ಭರವಸೆ ನೀಡಿದರು.
ಪತಂಜಲಿ ಯೋಗ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಮಾತನಾಡಿ, ಪ್ರತಿ ವಾರ್ಡ್‌ನಲ್ಲಿ ಯೋಗ ಕೇಂದ್ರ ಆರಂಭವಾಗಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಪ್ರಮುಖವಾಗಿದೆ. ಯೋಗವನ್ನು ಪ್ರತಿನಿತ್ಯ ರೂಡಿ ಮಾಡಿಕೊಂಡು ತಮ್ಮ ಆರೋಗ್ಯವಂತ ಬದುಕನ್ನು ಕಟ್ಟಿಕೊಳ್ಳಬೇಕು ರೋಗ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಕಾಡಯ್ಯ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ತಹಸೀಲ್ದಾರ್ ಸಿದರಾಯ ಭೋಸಗಿ, ಡಾ.ಮಲ್ಲಿಕಾರ್ಜುನ ಹಂಜಿ, ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಚಿದಾನಂದ ಸವದಿ, ಸಿಪಿಐ ಸಂತೋಷ ಹಳ್ಳೂರ, ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ, ಉದ್ಯಮಿ ರಫೀಕ್ ಡಾಂಗೆ, ಎಸ್.ಕೆ.ಹೊಳೆಪ್ಪನವರ, ಸುರೇಶ ಚಿಕ್ಕಟ್ಟಿ, ವಿಕಾಸ ತಾಂಬಟ, ಅರ್.ಡಿ.ಧರಿಗೌಡ,ನರಸು ಬಡಕಂಬಿ, ಎಸ್.ಆರ್.ಗೂಳಪ್ಪನವರ, ಸಂತೋಷ ಸಾವಡಕರ, ಶಿವಾನಂದ ಬುರ್ಲಿ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವರದಿ.:ರಾಜು ವಾಘಮಾರೆ


