Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಂದೆ ತಾಯಿ ವಿರುದ್ಧವೇ ತಿರುಗಿ ಬಿದ್ದ ಯೂಟ್ಯೂಬರ್ ಹೆಂಡತಿ : ಲವ ಜಿಹಾದ್ ಅಲ್ಲವಂತೆ

Advertisement
ಹುಬ್ಬಳ್ಳಿ: ಖ್ಯಾತ ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ಮದುವೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ತಮ್ಮದು ಲವ್ ಜಿಹಾದ್ ಅಲ್ಲ, ಮದುವೆ ಬಳಿಕ ನನ್ನ ತಾಯಿಯೇ ಸಪೋರ್ಟ್ ಮಾಡಿದ್ದಾರೆ ಎಂದು ಮುಕಳೆಪ್ಪ ಪತ್ನಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಮುಕಳೆಪ್ಪ ಪತ್ನಿ, ನಮ್ಮದು ಲವ್ ಜಿಹಾದ್ ಅಲ್ಲ, ನಾವಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ.

ಮದುವೆ ಬಳಿಕ ನನ್ನ ಪೋಷಕರು ಸಪೋರ್ಟ್ ಮಾಡಿದ್ದಾರೆ. ನನ್ನ ತಾಯಿಯೇ ಬೆಂಬಲ ನೀಡಿದ್ದಾರೆ. ಆದರೆ ಈಗ ಯಾಕೆ ಅವರು ನಮ್ಮ ವಿರುದ್ಧ ದೂರು ನೀಡಿದ್ದಾರೆ ಗೊತ್ತಿಲ್ಲ. ನನ್ನ ತಾಯಿ ನಮಗೆ ಸಪೋರ್ಟ್ ಮಾಡಿರುವ ಬಗ್ಗೆ ನನ್ನ ಬಳಿ ದಾಖಲೆಗಳು ಇವೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಹಂಚಿಕೊಳ್ಳುತ್ತೇನೆ. ನನ್ನ ತಾಯಿಗೆ ಯಾರೋ ಮೈಂಡ್ ವಾಶ್ ಮಾಡಿ ಈ ರೀತಿ ಹೇಳಿಸುತ್ತಿದ್ದಾರೆ. ನನ್ನ ತಾಯಿಯೇ ಮದುವೆ ಸಪೋರ್ಟ್ ಮಾಡಿದ್ದರು, ಬಳಿಕವೂ ಬೆಂಬಲ ನೀಡಿದ್ದರು.

ಈಗ ಇದ್ದಕ್ಕಿದ್ದಂತೆ ಉಲ್ಟಾ ಹೊಡೆಯಲು ಬೇರೆ ಏನೋ ಕಾರಣವಿರಬಹುದು. ಯಾರೋ ಹೇಳಿಕೊಟ್ಟು ಮಾಡಿಸುತ್ತಿರಬಹುದು. ಇದರಿಂದ ನಮ್ಮ ಕುಟುಂಬಕ್ಕೆ ಏನಾದರೂ ಆದರೆ ಅವರೇ ಜವಾಬ್ದಾರಿ ಎಂದು ಮುಕೆಳೆಪ್ಪ ಪತ್ನಿ ಹೇಳಿಕೆ ನೀಡಿದ್ದಾರೆ.

ಯೂಟ್ಯೂಬರ್ ಮುಕಳೆಪ್ಪ ಸುಳ್ಳು ದಾಖಲೆಗಳನ್ನು ನೀಡಿ ಹಿಂದೂ ಯುವತಿಯನ್ನು ವಿವಾಹವಾಗಿದ್ದಾರೆ. ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಹಿಂದೂಪರ ಕಾರ್ಯಕರ್ತರು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದರ ಬೆನ್ನಲ್ಲೇ ಹಿಂದೂಕಾರ್ಯಕರ್ತರೊಂದಿಗೆ ಆಗಮಿಸಿ ಯುವತಿಯ ತಾಯಿ ಕೂಡ ದೂರು ದಾಖಲಿಸಿದ್ದರು, ಮುಕೆಳೆಪ್ಪ ರೀಲ್ಸ್ ಹೆಸರಲ್ಲಿ ತನ್ನ ಮಗಳನ್ನು ಕಿಡ್ನ್ಯಾಪ್ ಮಾಡಿ ಮದುವೆಯಾಗಿದ್ದಾನೆ. ಬಳಿಕ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುಕಳೆಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ