Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಹೀರ್ ಖಾನ್ ದಂಪತಿಗೆ ಗಂಡು ಮಗುವಿನ ಸಂಭ್ರಮ

Advertisement
46 ನೇ ವಯಸ್ಸಿಗೆ ತಂದೆಯಾದ ಮಾಜಿ ಕ್ರಿಕೆಟಿಗ

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ 46ನೇ ವಯಸ್ಸಿನಲ್ಲಿ ತಂದೆಯಾಗಿದ್ದಾರೆ. ಜಹೀರ್​ ಪತ್ನಿ ಹಾಗೂ ಬಾಲಿವುಡ್ ನಟಿ ಸಾಗರಿಕಾ ಘಾಟ್ಗೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ದಂಪತಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. ತಮಗೆ ಗಂಡು ಮಗು ಜನಿಸಿದೆ ಎಂದು ಜಹೀರ್​ ದಂಪತಿ ಮಗುವಿನೊಂದಿಗಿನ ಫೋಟೊವನ್ನು ಹಂಚಿಕೊಂಡು ಖುಷಿ ವ್ಯಕ್ತಪಡಿಸಿದೆ. ಫ್ಯಾನ್ಸ್​ ಸೇರಿ ಗಣ್ಯರು ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

ಪ್ರೇಮ ವಿವಾಹಜಹೀರ್ ಖಾನ್ ಮತ್ತು ಸಾಗರಿಕಾ ಘಾಟ್ಗೆ ಪ್ರೇಮ ವಿವಾಹವಾಗಿದ್ದಾರೆ. ಕೆಲವು ದಿನಗಳ ಕಾಲ ಡೇಟಿಂಗ್ ಮಾಡಿದ್ದ ಈ ಜೋಡಿ ನವೆಂಬರ್ 23, 2017ರಂದು ವಿವಾಹವಾಗಿತ್ತು. ಸದ್ಯ ಜಹೀರ್​ ದಂಪತಿ ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಇದೀಗ ಎಂಟು ವರ್ಷಗಳ ನಂತರ, ದಂಪತಿಗಳು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.



 

ಮಗುವಿಗಿಟ್ಟ ಹೆಸರೇನುಜಹೀರ್​ ಖಾನ್​ ಮತ್ತು ಸಾಗರಿಕಾ ಘಾಟ್ಗೆ ದಂಪತಿಗೆ ಜನಿಸಿರುವ ಗಂಡು ಮಗುವಿಗೆ ಫತೇಸಿನ್ಹ್ ಖಾನ್ ಎಂದು ನಾಮಕರಣ ಮಾಡಲಾಗಿದೆ.

ಸದ್ಯ ಜಹೀರ್ ಖಾನ್ ಅವರು ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮಾರ್ಗದರ್ಶನದಲ್ಲಿ ಲಕ್ನೋ ಆಡಿರುವ ಏಳು ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದ್ದು, ಮೂರರಲ್ಲಿ ಸೋಲು ಕಂಡಿದೆ. 8 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಜಹೀರ್ಖಾನ್ಕ್ರಿಕೆಟ್ದಾಖಲೆಜಹೀರ್ ಖಾನ್ 2000 ರಿಂದ 2014 ರವರೆಗೆ 14 ವರ್ಷಗಳ ಕಾಲ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ 92 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 1231 ರನ್ ಗಳಿಸಿ 311 ವಿಕೆಟ್‌ಗಳನ್ನು ಪಡೆದಿದ್ದಾರೆ. 200 ಏಕದಿನ ಪಂದ್ಯಗಳನ್ನು ಆಡಿರುವ ಇವರು 792 ರನ್ ಗಳಿಸಿ 282 ವಿಕೆಟ್‌ ಉರುಳಿಸಿದ್ದಾರೆ. ಟೆಸ್ಟ್‌ನಲ್ಲಿ 11 ಬಾರಿ ಐದು ವಿಕೆಟ್ ಗೊಂಚಲು ಪಡೆದಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ ಎರಡೂ ಇನ್ನಿಂಗ್ಸ್​ಗಳಲ್ಲಿ 10 ವಿಕೆಟ್‌ಗಳನ್ನು ಪಡೆದಿದ್ದರು. 87 ರನ್​ಗಳಿಗೆ 7 ವಿಕೆಟ್​ ಪಡೆದಿದ್ದು, ಇವರ ಅತ್ಯುತ್ತಮ ಬೌಲಿಂಗ್​ ದಾಖಲೆ ಆಗಿದೆ.

ಐಪಿಎಲ್ದಾಖಲೆಐಪಿಎಲ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಜಹೀರ್​ ಖಾನ್​ ಒಟ್ಟು 100 ಪಂದ್ಯಗಳನ್ನು ಆಡಿ 102 ವಿಕೆಟ್​ಗಳನ್ನು ಕಬಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ