Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀ ಕನ್ನಡದ ಸರಿಗಮಪ ಆಡಿಷನ್ ವಿಜಯಪುರದಲ್ಲಿ ದಿ. 22/09/2024 ಇದೇ ಭಾನುವಾರ

Advertisement
ವಿಜಯಪುರ:-ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಕನ್ನಡದ ನಂ 1ವಾಹಿನಿ ಜೀ಼ ಕನ್ನಡ , ಈಗ ಮತ್ತೊಮ್ಮೆ ಸರಿಗಮಪ ರಿಯಾಲಿಟಿ ಶೋ ಮೂಲಕ ಕರುನಾಡಿನ ಹಾಡುಗರನ್ನ ಹುಡುಕುವ ಕೆಲಸ ಶುರುಮಾಡಿದೆ. ಜೀ಼ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್, ಕಾಮಿಡಿ ಕಿಲಾಡಿಗಳು,ಡಿಕೆಡಿ ಮತ್ತು ಮಹಾನಟಿ ಮೂಲಕ ಈಗಾಗಲೆ ಸಾಕಷ್ಟು ನಟ-ನಟಿಯರು ,ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್ ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ಼ ಕನ್ನಡ ವಾಹಿನಿ ಇದೀಗ ಸರಿಗಮಪ ಶೋ ಮೂಲಕ ನಿಮ್ಮೂರಿನಲ್ಲಿರುವ ಗಾಯಕ- ಗಾಯಕಿಯಾಗುವ ಕನಸು ಹೊತ್ತಿರುವ,ಪ್ರತಿಭೆಗಳಿಗೆ ವೇದಿಕೆಯಾಗಲು ಬಂದಿದೆ.

ಕಳೆದ ಬಾರಿ ವಿದೇಶಿ ಕನ್ನಡಿಗ ಪ್ರತಿಭೆಗಳೊಂದಿಗೆ ಕನ್ನಡದ ಕಂಪನ್ನ ಜಗತ್ತಿಗೆ ಬಿತ್ತರಿಸಿ ಸರಿಗಮಪ ಈ ಬಾರಿ 6 ರಿಂದ 60 ವಯಸ್ಸಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಸಜ್ಜಾಗಿದೆ. ಈ ಮೂಲಕ ಕನ್ನಡದ ಸಂಗೀತ ಮತ್ತು ಚಿತ್ರರಂಗಕ್ಕೆ ಭರವಸೆಯ ಗಾಯಕ-ಗಾಯಕಿಯರನ್ನ ನೀಡುವ ಕೆಲಸವನ್ನ ಈ ರಿಯಾಲಿಟಿ ಶೋ ಮಾಡಲಿದೆ.ಸರಿಗಮಪ ಶೋ ಮೂಲಕ ಹಲವಾರು ಪ್ರತಿಭೆಗಳು ಹೊರಹೊಮ್ಮಿ ಇಂದು ಸಂಗೀತ ಲೋಕದ ಸಾಧಕರ ಸಾಲಿಗೆ ಸೇರಿದ್ದಾರೆ, ನಿಮ್ಮ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ನಿಮ್ಮೂರಿಗೆ ಬಂದು, ನಿಮ್ಮ ಪ್ರತಿಭಯೆನ್ನ ಗುರುತಿಸಿ ನಿಮ್ಮನ್ನ ಈ ವೇದಿಕೆ ಕರೆತರುವ ಕೆಲಸವನ್ನ ಈ ಮೂಲಕ ಮಾಡಲಿದೆ.

ಸರಿಗಮಪ ಶೋಗಾಗಿ ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ನಡೆಸಲ್ಲಿದ್ದು ,ಇದರ ಆರಂಭಿಕ ಹಂತವೆಂಬಂತೆ 22-09-2024 ಭಾನುವಾರ ಬೆಳಗ್ಗೆ 9 ಗಂಟೆಗೆ..

#ಆಡಿಷನ್ ನಡೆಯುವ ಸ್ಥಳ :-BLDEA'S ಸಮನ್ವಯ ಆಂಗ್ಲ ಮಾಧ್ಯಮ ಶಾಲೆ,ಪಾಟೀಲ್ ಹೋಂಡಾ ಶೋರೂಂ ಎದುರು,ವಿ2 & ಎಸ್ಎಸ್ ಪಿಯು ಕಾಲೇಜ್ ಹತ್ತಿರ,BLDE ರಸ್ತೆ,ವಿಜಯಪುರ.ಇಲ್ಲಿ ಆಡಿಷನ್ಸ್ ನಡೆಯಲ್ಲಿದ್ದು.ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು 2 ಪಾಸ್ಪೋರ್ಟ್ ಸೈಜ್ ಪೋಟೋ ಜೊತೆ ಅಡ್ರಸ್p ಪ್ರೂಫ್ ಜೆರಾಕ್ಸ್ ತೆಗೆದುಕೊಂಡು ಬಂದು ಭಾಗವಹಿಸಬಹುದಾಗಿದೆ. ಜೀ಼ ಕನ್ನಡ ನಡೆಸುವ ಈ ಆಡಿಷನ್ ಪ್ರಕ್ರಿಯೆಯಲ್ಲಿ ಯಾವುದೇ ಹಣವನ್ನ ಪಡೆಯಲಾಗುವುದಿಲ್ಲವೆಂದು ವಾಹಿನಿ ತಿಳಿಸಿದೆ.

ವರದಿ:- ರಾಜೇಶ್. ಎಸ್. ದೇಸಾಯಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ