LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಶ್ ಸೋಧಿ ಮಾರಕ ದಾಳಿಗೆ ತತ್ತರಿಸಿದ ಜಿಂಬಾಬ್ವೆ

Advertisement
----------------------------------------------------------ಚುಟುಕು ತ್ರಿಕೋನ ಕ್ರಿಕೆಟ್ ಸರಣಿ: ಕಿವೀಸ್ ಗೆ 60 ರನ್ ಗಳ ಜಯ

ಹರಾರೆ ( ಜಿಂಬಾಬ್ವೆ): ನ್ಯೂಜಿಲೆಂಡ್ ಕ್ರಿಕೆಟ್ ತಂಡ ಇಲ್ಲಿನ ಹರಾರೆ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಟ್ವೆಂಟಿ-20 ತ್ರಿಕೋನ ಕ್ರಿಕೆಟ್ ಸರಣಿಯ ಪಂದ್ಯದಲ್ಲಿಂದು  ಆತಿಥೇಯ ಜಿಂಬಾಬ್ವೆ ವಿರುದ್ಧ 60 ರನ್ ಗಳಿಂದ ಜಯಗಳಿಸಿತು.



ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 190 ರನ್ ಗಳಿಸಿತ್ತು. 191 ರನ್ ಗಳ ಗುರಿ ಬೆನ್ನಟ್ಟಿದ ಜಿಂಬಾಬ್ವೆ 18.5 ಓವರುಗಳಲ್ಲಿ 130 ರನ್ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು ಪರಾಭವಗೊಂಡಿತು. ನ್ಯೂಜಿಲೆಂಡ್ ಪರವಾಗಿ ವಿಕೆಟ್ ಕೀಪರ್ ಬ್ಯಾಟ್ಸಮನ್ ಶೆಪರ್ಡ್ 45 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.

ರಚಿನ್ ರವೀಂದ್ರ 39 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ನೆರವಿನಿಂದ 63 ರನ್ ಗಳಿಸಿದರು. ಜಿಂಬಾಬ್ವೆ ಪರವಾಗಿ ಗಾರವಾ 34 ಕ್ಕೆ 4 ವಿಕೆಟ್ ಪಡೆದರು. ಉತ್ತಮ ಮೊತ್ತದ ಗುರಿ ಬೆನ್ನಟ್ಟಿದ ಜಿಂಬಾಬ್ವೆ ಪರವಾಗಿ ಟೋನಿ ಮುನಯುಂಗಾ ಮಾತ್ರ ಕೊಂಚ ಪ್ರತಿರೋಧ ತೋರಿ 30 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ನೆರವಿನಿಂದ 40 ರನ್ ಗಳಿಸಿದರು. ನ್ಯೂಜಿಲೆಂಡ್ ಪರವಾಗಿ ಇಶ್ ಸೋಧಿ 12 ರನ್ ಗೆ 4 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು. ಅವರು  ಈ ಉತ್ತಮ ಬೌಲಿಂಗ್ ಸಾಧನೆಗಾಗಿ ಪಂದ್ಯ ಶ್ರೇಷ್ಠ ಗೌರವವನ್ನೂ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ