LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಡಿಸೆಂಬರ್ ಅಂತ್ಯಕ್ಕೆ ಜಿಪಂ, ತಾಪಂ, ಗ್ರಾಪಂ ಚುನಾವಣೆ : ಸಂಪುಟ ಸಭೆಯಲ್ಲಿ ತೀರ್ಮಾನ

Advertisement

ಬೆಂಗಳೂರು: ಮಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಬೃಹತ್ ಯೋಜನೆಗಳನ್ನು ಪ್ರಕಟಿಸುವುದರ ಜತೆಗೆ, ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಮುಂಬರುವ ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚುನಾವಣಾ ಸಿದ್ಧತೆಗಳ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡರು.

ರಾಜ್ಯದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಆಡಳಿತಾವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ (EVM) ಬದಲಾಗಿ ಮತಪೆಟ್ಟಿಗೆಗಳನ್ನು (ಬ್ಯಾಲೆಟ್ ಬಾಕ್ಸ್) ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

 ಈ ಹಿನ್ನೆಲೆಯಲ್ಲಿ ಅಗತ್ಯವಿರುವ ನೂತನ ಮತಪೆಟ್ಟಿಗೆಗಳ ಖರೀದಿ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಲು ಲೈವ್ ವೆಬ್‌ಕಾಸ್ಟಿಂಗ್ ಸೌಲಭ್ಯ ಕಲ್ಪಿಸಲು 151.31 ಕೋಟಿ ರೂಪಾಯಿಗಳ ಆಡಳಿತಾತ್ಮಕ ವೆಚ್ಚಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವುಬೆಳಗಾವಿಯಲ್ಲಿ ಅಕ್ರಮ ಪೆಟ್ರೋಲ್, ಡೀಸೆಲ್ ದಂಧೆ ಜಾಲ ಭೇದಿಸಿದ ಸಿಸಿಬಿ: ಇಬ್ಬರ ಬಂಧನ, ಲಕ್ಷಾಂತರ ರೂ. ಮೌಲ್ಯದ ಇಂಧನ ಜಪ್ತಿ!ಅವರಾದಿಯಲ್ಲಿ ಆಸ್ತಿಗಾಗಿ ತಂದೆ-ಮಗಳು ಕೊಲೆ , ಮೂವರು ಆರೋಪಿಗಳ ಬಂಧನಕಾರಾಗೃಹ ಇಲಾಖೆಯಲ್ಲಿ 576 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ