ನವದೆಹಲಿ: ಅಲ್ ಖೈದಾ ಉಗ್ರ ಸಂಘಟನೆಯ ಜೊತೆಗೆ ನಂಟು ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭಾರತದಲ್ಲಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಜೊತೆಗೆ ಅಲ್ ಖೈದಾ ನಂಟು ಹಿನ್ನಲೆಯಲ್ಲಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಪ್ರದೇಶಗಳ ಮೇಲೆ ಎನ್ಐಎ ಏಕಕಾಲಕ್ಕೆ ದಾಳಿ ನಡೆಸಿದೆ.
ಕರ್ನಾಟಕ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ, ಅಸ್ಸಾಂ ರಾಜ್ಯ ಸೇರಿದಂತೆ 9 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಬ್ಯಾಂಕ್ ವ್ಯವಹಾರ ದಾಖಲೆಗಳುಮ ಎಲೆಕ್ಟ್ರಾನಿಕ್ ಡಿವೈಸ್ಮ ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ, 2023ರಲ್ಲಿ ಪ್ರಕರಣದ ತನಿಖೆ ನಡೆಸಿ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣದ ಸಂಬಂಧ ಮುಂದುವರೆದ ತನಿಖೆಯ ಭಾಗವಾಗಿ ಎನ್ಐಎ ದಾಳಿ ನಡೆಸಿದೆ ಎನ್ನಲಾಗಿದೆ.